ವ್ಯಕ್ತಿಯ ಬದುಕನ್ನು ರೂಪಿಸುವ ಶಿಕ್ಷಣದ ಅಗತ್ಯತೆ ಇಂದಿನ ಪಠ್ಯದಲ್ಲಿ ಬೇಕಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭೆಯಲ್ಲಿ ’ಗುರುದೇವ’ ಚಿಣ್ಣರ ಚಿಲುಮೆ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧ್ವಿ ಶ್ರೀ ಶ್ರೀಮಾತಾನಂದಮಯೀ ಉದ್ಘಾಟಿಸಿದರು.
ಬಂಟ್ವಾಳ ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕರಾದ ಪ್ರಕಾಶ್ ಮಾತನಾಡಿ ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಒಡಿಯೂರಿನಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಮಾತ್ರ ಸಿಗಲು ಸಾಧ್ಯ ಎಂದರು.
ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗುರುಕುಲ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಿತು. ಪ್ರೌಢಶಾಲಾ ವಿಭಾಗದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಪ್ರಾಥಮಿಕ ಶಾಲಾ ಸಂಯೋಜಕರುಗಳಾದ ಪುಷ್ಪಾ ಎಚ್., ಸುಜಾತಾ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರುಗಳಾದ ಎಚ್.ಕೆ. ಪುರುಷೋತ್ತಮ, ಬಿ.ಕೆ. ಚಂದ್ರಶೇಖರ್, ಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಂಗಳೂರು ವಯಲದ ಅಧ್ಯಕ್ಷ ಜಯಂತ್ ಜೆ.ಕೋಟ್ಯಾನ್, ಒಡಿಯೂರು ಶ್ರೀ ಗುರುದೇವ ಐ.ಟಿ.ಐ.ನ ಪ್ರಾಂಶುಪಾಲ ಸುಬ್ರಹ್ಮಣ್ಯ ಎಸ್. ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಅಮೈ ಕೃಷ್ಣ ಭಟ್ ಪ್ರಾಸ್ತಾವನೆಗೈದರು. ಶಿಕ್ಷಕಿಯರಾದ ರೇಣುಕಾ ಎಸ್.ರೈ, ಕೃಪಾ, ವಸಂತಿ, ಮಂಜುಳ, ರೂಪಿಕಾ, ಉದಯಕುಮಾರ್ ರೈ ವಿಜೇತರ ಪಟ್ಟಿಯನ್ನು ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ನವಿತಾ ವಂದಿಸಿದರು. ಶಿಕ್ಷಕ ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಬದುಕು ರೂಪಿಸುವ ಶಿಕ್ಷಣ ಇಂದಿನ ಅಗತ್ಯ: ಒಡಿಯೂರು ಸ್ವಾಮೀಜಿ"