ಜಿಲ್ಲಾ ಸುದ್ದಿ

ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ವಿ.ಪಿ.ಧನಂಜಯನ್ ಆಯ್ಕೆ

www.bantwalnews.com

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜ.13ರಿಂದ 15ವರೆಗೆ ನಡೆಯಲಿರುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ಖ್ಯಾತ ನೃತ್ಯಪಟು ವನ್ನಾಡಿಲ್ ಪುದಿಯವೀಟಿಲ್ ಧನಂಜಯನ್ (ವಿ.ಪಿ. ಧನಂಜಯ) ಆಯ್ಕೆಯಾಗಿದ್ದಾರೆ.

ಜಾಹೀರಾತು

ಜನವರಿ 13ರಂದು ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗವೇದಿಕೆಯಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ ಎಂದು ಮೂಡುಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಆಳ್ವಾಸ್ ವಿರಾಸತ್‌ಗೆ ಚಾಲನೆ ನೀಡಲಿದ್ದಾರೆ. ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎನ್. ವಿನಯ ಹೆಗ್ಡೆ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯುವುದು.

ವಿ.ಪಿ. ಧನಂಜಯನ್ ಅವರು ಏಪ್ರಿಲ್ 30, 1939ರಲ್ಲಿ ಕೇರಳ ರಾಜ್ಯದ ಆಯುರ್ವೇದ, ಕಳರಿಫಯೆಟ್ ಮತ್ತು ಕಥಕ್ಕಳಿ ಕಲೆಗಳಿಗೆ ಹೆಸರುವಾಸಿಯಾದ ಪಯ್ಯನ್ನೂರಿನಲ್ಲಿ ಜನಿಸಿದರು.

ಜಾಹೀರಾತು

ವಿದ್ಯಾರ್ಥಿ ದೆಸೆಯಲ್ಲಿಯೇ ಬಹಳ ಚುರುಕಿನ, ಸಂಸ್ಕೃತ ಭಾಷೆಯಲ್ಲಿ ಹಿಡಿತವಿರುವ ಹಾಗೂ ಆಗಲೇ ಕವಿಪ್ರತಿಭೆಯನ್ನು ಒಳಗೊಂಡಿದ್ದ ವಿ.ಪಿ. ಧನಂಜಯನ್‌ ಮದ್ರಾಸಿನ ಕಲಾಕ್ಷೇತ್ರವನ್ನು ತನ್ನ ಪ್ರತಿಭೆಯ ಮೂಲಕ ಪ್ರವೇಶಿಸಿ, ರುಕ್ಮಿಣೀದೇವಿಯವರ ಮಾರ್ಗದರ್ಶನದಲ್ಲಿ ಕಥಕ್ಕಳಿ ಮತ್ತು ಭರತನಾಟ್ಯದಲ್ಲಿ ಪಳಗಿ ಖ್ಯಾತ ಪುರುಷ ನೃತ್ಯ ಪಟುವಾಗಿ ಪ್ರಸಿದ್ಧರಾದರು. ನೃತ್ಯಗಾರ್ತಿ ಶಾಂತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಿ.ಪಿ. ಧನಂಜಯನ್ ದಂಪತಿಗಳು ನೃತ್ಯಕ್ಷೇತ್ರದಲ್ಲಿ ಧನಂಜಯನ್ಸ್ ಎಂದೇ ಖ್ಯಾತರಾಗಿದ್ದಾರೆ. ಭಾರತದ ಶ್ರೇಷ್ಠ ನಾಗರಿಕ ಪ್ರಶಸ್ತಿ ಪದ್ಮಭೂಷಣವೂ ಸೇರಿದಂತೆ ಕೇರಳ, ತಮಿಳ್ನಾಡು ಸರಕಾರಗಳ ಹಾಗೂ ಅನೇಕಾನೇಕ ಸಂಘ ಸಂಸ್ಥೆಗಳ ಪ್ರಶಸ್ತಿಗಳಿಗೆ, ಗೌರವಗಳಿಗೆ ಪಾತ್ರರಾಗಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ