ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದ ವಿಶೇಷ ಸಾಧನೆಗಾಗಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ, ಸನ್ಮಾನಿಸಿದೆ.
ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಹೆಗ್ಗಡೆಯವರನ್ನು ಸನ್ಮಾನಿಸಿದರು. ಈ ತಂಡಕ್ಕೆ ಮಾನವ ಸಂಪನ್ಮೂಲ ವಿಭಾಗ ನಿರ್ದೇಶಕಿ ಮಮತಾ ಹರೀಶ್ ರಾವ್ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. . ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ’ವಿದ್ಯಾರ್ಥಿ ವಿನಿಮಯ’ ಯೋಜನೆಯಡಿ ತಂಡವು 11 ದಿನಗಳ ಕಾಲ ನಿಟ್ಟೆಯ ಪ್ರೊಫೆಸರ್ ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲು ಆಗಮಿಸಿದೆ.
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಛೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು. ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ಒಕ್ಕೂಟ ಸಭೆಗೆ ತಂಡವು ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಸಿರಿ ನಿರ್ದೇಶಕಿ ಮನೋರಮಾ ಭಟ್, ಪ್ರಾಂಶುಪಾಲ ಸುರೇಶ್ ಸಾಲಿಯಾನ್ ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು.