ಜಿಲ್ಲಾ ಸುದ್ದಿ

ಡಾ.ಹೆಗ್ಗಡೆಯವರಿಗೆ ಪೆನ್ಸಿಲ್ವೇನಿಯಾ ವಿವಿ ಗೌರವ

bantwalnews.com

ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದ ವಿಶೇಷ ಸಾಧನೆಗಾಗಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ, ಸನ್ಮಾನಿಸಿದೆ.

ಜಾಹೀರಾತು

ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು  ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಹೆಗ್ಗಡೆಯವರನ್ನು ಸನ್ಮಾನಿಸಿದರು. ಈ ತಂಡಕ್ಕೆ ಮಾನವ ಸಂಪನ್ಮೂಲ ವಿಭಾಗ ನಿರ್ದೇಶಕಿ ಮಮತಾ ಹರೀಶ್ ರಾವ್ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. . ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ’ವಿದ್ಯಾರ್ಥಿ ವಿನಿಮಯ’ ಯೋಜನೆಯಡಿ ತಂಡವು 11 ದಿನಗಳ ಕಾಲ ನಿಟ್ಟೆಯ ಪ್ರೊಫೆಸರ್ ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲು ಆಗಮಿಸಿದೆ.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಛೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು.  ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ಒಕ್ಕೂಟ ಸಭೆಗೆ ತಂಡವು ಭೇಟಿ ನೀಡಿ ಅಧ್ಯಯನ ನಡೆಸಲಿದೆ.  ಸಿರಿ ನಿರ್ದೇಶಕಿ ಮನೋರಮಾ ಭಟ್, ಪ್ರಾಂಶುಪಾಲ ಸುರೇಶ್ ಸಾಲಿಯಾನ್ ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ