ಅಮ್ಮುಂಜೆ-ಕಲಾಯಿ ಸ್ಟ್ರೈಕರ್‍ಸ್ ಕ್ರಿಕೆಟರ್‍ಸ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಕಲಾಯಿ ಇವುಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಹೊನಲು ಬೆಳಕಿನ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಜನವರಿ 21 ರಂದು ಕಲಾಯಿಯ ಜೆಕೆಸಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯು.ಪಿ. ಇಬ್ರಾಹಿಂ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಪ್ರಶಾಂತ್ ಕುಲಾಲ್ ಸಹಿತ ಹಲವು ಗಣ್ಯರು ಭಾಗವಹಿಸುವರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್"