ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಅಳಿಕೆ ವಿದ್ಯಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹೇಳಿದರು.
ಅಳಿಕೆ ವಾಣಿ ವಿಹಾರದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಹಿರಿಯ ಪ್ರಾರ್ಥಮಿಕ ಶಾಲೆ, ಪ್ರೌಢ ಶಾಲೆ ಬಾಲಕಿಯರ ವಿಭಾಗ ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಕೇತನಮ್ ಪದವಿಪೂರ್ವ ವಿದ್ಯಾಲಯದ ಸಂಯುಕ್ತ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ ವಹಿಸಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ಯನಪೋಯ ವಿಶ್ವವಿದ್ಯಾಲಯ ಮನೋರೋಗ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ರವಿಚಂದ್ರ ಕಾರ್ಕಳ್, ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಕಾರ್ಯದರ್ಶಿ ಚಂದ್ರಶೇಖರ ಭಟ್, ವಿದ್ಯಾಸಂಸ್ಥೆಗಳ ಸಂಚಾಲಕ ಕೆ ಎಸ್ ಕೃಷ್ಣ ಭಟ್, ಪ್ರಶಾಂತಿನಿಕೇತನಮ್ ಪದವಿ ಪೂರ್ವವಿದ್ಯಾಲಯ ಸಂಚಾಲಕಿ ವೃಂದಾ ರಾವ್, ಪ್ರಾಂಶುಪಾಲ ಪದ್ಯಾಣ ಗಣಪತಿ ಭಟ್ ಉಪಸ್ಥಿತರಿದ್ದರು.
ವಿಶ್ರಾಂತ ಮುಖ್ಯ ಶಿಕ್ಷಕ ರುಕ್ಮಯ ಗೌಡ ಸ್ವಾಗತಿಸಿದರು. ಪ್ರೌಢ ಶಾಲೆ ಮುಖ್ಯ ಶಿಕ್ಷಕ ರಘು ಟಿ. ವೈ., ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಈಶ್ವರ ನಾಯ್ಕ ಎಸ್ ವರದಿ ವಾಚಿಸಿದರು. ಪ್ರೌಢ ಶಾಲಾ ಶಿಕ್ಷಕ ಅಶೋಕ್ ಕುಮಾರು ವಂದಿಸಿದರು. ಶಿಕ್ಷಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಿಸಿದರು.