ಜಿಲ್ಲಾ ಸುದ್ದಿ

ಒಂದೇ ಕುಟುಂಬದ ನಾಲ್ವರು ನೀರುಪಾಲು

bantwalnews.com report

ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು ಸಮೀಪ ನಾಲ್ವರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ತಾಲೂಕಿನ ನಡ ಗ್ರಾಮದ ಅಂತ್ರಾಯಿಪಲ್ಕೆ ಹೊಳೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಒಂದೇ ಕುಟುಂಬದ ರಹೀಂ, ಅವರ ಪತ್ನಿ ರುಬೀನಾ , ಯಾಸ್ಮೀನ್ , ಸುಬಾನ್  ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟವರು.

ಜಾಹೀರಾತು

ಎಲ್ಲರೂ ಉಡುಪಿ ಜಿಲ್ಲೆಯ ಕಾಪು ಪಕೀರನಕಟ್ಟೆ ನಿವಾಸಿಗಳಾಗಿದ್ದು, ಬುಧವಾರ ಬೆಳಗ್ಗೆ ಕಾಜೂರು ದರ್ಗಾಕ್ಕೆ ಭೇಟಿ ನೀಡಿ ಬರುವ ಸಂದರ್ಭ ಹೊಳೆಗೆ ಸ್ನಾನ ಮಾಡಲು ಇಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೈಮೂನಾ ಎಂಬಾಕೆ ಅಪಾಯದಿಂದ ಪಾರಾಗಿದ್ದು, ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಡಿವೈಎಸ್ಪಿ ರವೀಶ್.ಸಿ.ಆರ್. ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ