ಕಲ್ಲಡ್ಕ

ನಿಟಿಲಾಪುರ ಸದಾಶಿವ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ

bantwalnews.com

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಡಿ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಗರ್ಭಗುಡಿ, ಒಳಾಂಗಣ, ಹೊರಾಂಗಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ, ಕಲ್ಲಡ್ಕ ವಲಯ ಗೋಳ್ತಮಜಲು ಕಾರ್ಯಕ್ಷೇತ್ರ ಒಕ್ಕೂಟ ಸದಸ್ಯರು ಸ್ವಚ್ಚಗೊಳಿಸಿದರು.

ಜಾಹೀರಾತು

ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು, ನೌಕರ ವರ್ಗ,  ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು,  ಊರ ಭಕ್ತವೃಂದದವರು , ಜೀರ್ಣೋದ್ಧಾರ ಸಮಿತಿ, ಉತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಬರಿಮಾರ್,  ವಲಯ ಮೇಲ್ವಿಚಾರಕ ಶಿವಪ್ಪ ಎಂ.ಕೆ., ಸೇವಾ ಪ್ರತಿನಿಧಿ ಮಾಲತಿ,  ಒಕ್ಕೂಟ ಅಧ್ಯಕ್ಷೆ ಮೋಹಿನಿ ಮತ್ತು ಪದಾಽಕಾರಿಗಳು, ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳಾದ ಕೆ.ಪದ್ಮನಾಭ ರೈ, ಬಟ್ಯಪ್ಪ ಶೆಟ್ಟಿ,  ಗಣೇಶ್ ನಾಯ್ಕ,  ಬಾಲಪ್ಪ ಗೌಡ,  ಡಾ| ವಸಂತ ನಿಟಿಲಾಪುರ,  ಹೇಮಾವತಿ, ಚೇತನಾ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಆಶಯದಂತೆ ಸ್ವಚ್ಚತಾ ಅಭಿಯಾನವನ್ನು ಮುಂದುವರಿಸಿಕೊಂಡು ದೇವಸ್ಥಾನ ವಠಾರದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಬರಲು ನಿಶ್ಚಯಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts