ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕವನ-ಕಾವ್ಯ ಕಮ್ಮಟ ಕಾರ್ಯಕ್ರಮ ನಡೆಯಿತು.
ಕಾಲೇಜಿನ ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್ ಉಪನ್ಯಾಸ ನೀಡಿ ವಿದ್ಯಾರ್ಥಿಗಳಿಗೆ ಛಂದಸ್ಸು, ಲಯಗಳ ಬಗ್ಗೆ ವಿವರಿಸಿ ಕವನ ರಚನೆಯ ಮೂಲಭೂತ ನಿಯಮಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳನ್ನು ಕಾವ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಇಂಗ್ಲೀಷ್ ಉಪನ್ಯಾಸಕ ರಘುವೀರ್, ಉಪನ್ಯಾಸಕಿಯರಾದ ವಿಶ್ವಕುಮಾರಿ ಆರ್ ರೈ ಹಾಗೂ ಸಂದ್ಯಾಲಕ್ಷ್ಮಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಾಕೇಶ್ ಕುಮಾರ್ ಸ್ವಾಗತಿಸಿದರು. ಹರ್ಷಿತಾ ಕೆ ವಂದಿಸಿದರು. ಜಯರಾಜ್ ಕಾರ್ಯಕ್ರಮ ನಿರ್ವಹಿಸಿದರು.
(more…)