ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಘಟಕ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮವರ್ಷಾಚರಣೆ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಜನವರಿ 15ರಂದು ಅಮ್ಟೂರು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಬಿಜೆಪಿ ನಾಯಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪಕ್ಷ ನಾಯಕರಾದ ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಚೆನ್ನಪ್ಪ ಆರ್. ಕೋಟ್ಯಾನ್, ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಮಲಾಕ್ಷಿ ಪೂಜಾರಿ, ಉದ್ಯಮಿ ಡಾ. ಶರತ್ ಆಳ್ವ, ತಾಲೂಕು ಪಂಚಾಯಿತಿ ಸದಸ್ಯ ಮಹಾಬಲ ಆಳ್ವ ಭಾಗವಹಿಸುವರು. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ವರೆಗೆ ಕಾರ್ಯಕ್ರಮ ನಡೆಯುವುದು.
ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)