bantwalnews.com report
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಗದು ರಹಿತ ವಹಿವಾಟು ವಿಷಯದ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ಸ್ಟೇಟ್ ಬ್ಯಾಂಕ್‌ನ ಬಂಟ್ವಾಳ ಘಟಕದ ಮುಖ್ಯ ಪ್ರಬಂಧಕ ಅತುಲ್ ಎ.ಡಿ. ಕರ್ಕರೆ ಹಾಗೂ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಸ್ವಾಗತಿಸಿ, ತರಬೇತಿಯ ಸಂಯೋಜಕ ವಿಷ್ಣು ಪೂಜಾರಿ ವಂದಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಕಿಟ್ಟು ಕೆ. ರಾಮಕುಂಜ ಹಾಗು ಎನ್.ಸಿ.ಸಿ ಲೆಫ್ಟಿನೆಂಟ್ ಸುಂದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ಲೆನಿಷ ಅಂದ್ರಾದೆ ನಿರೂಪಿಸಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)