ಕನ್ಯಾನ ಭಾರತ ಸೇವಾಶ್ರಮದಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆ

bantwalnews.com

ಕನ್ಯಾನ ಭಾರತ ಸೇವಾಶ್ರಮದಲ್ಲಿ 53ನೇ ವಾರ್ಷಿಕೋತ್ಸವ, ಸ್ಥಾಪಕ ಧೀರೇಂದ್ರನಾಥ್ ಭಟ್ಟಾಚಾರ್ಯ ಅವರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಯನ್ನು ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ಎಂ ವೆಂಕಟೇಶ ಪೈ ಉದ್ಘಾಟಿಸಿದರು.

ಜಾಹೀರಾತು

ಅಧ್ಯಕ್ಷತೆ ವಹಿಸಿದ ಜೆಮ್‌ಶೆಡ್ ಪುರ್ ಟಾಟಾ ರಿಫ್ರೆಕ್ಟರೀಸ್ ನಿವೃತ್ತ ಆಡಳಿತ ನಿರ್ದೇಶಕ ಸಿ ದೇವದಾಸ್ ಕಾಮತ್ ಮಾತನಾಡಿ ಸಮಾಜಕ್ಕಾಗಿ ಅರ್ಪಣೆ ಮಾಡಿ ಕೆಲಸ ನಡೆಸುವವರಿಗೆ ನಾವು ಜತೆಯಾಗಿ ನಿಂತಾಗ ನಮ್ಮ ಪ್ರಗತಿಯೂ ಸಾಧ್ಯ ಎಂದು ತಿಳಿಸಿದರು.

ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಚಂದಪ್ಪ ಮೂಲ್ಯ, ನಿವೃತ್ತ ಸೇವಾಧಿಕಾರಿ ಎ. ಎನ್ ಮಾಣಿಪ್ಪಾಡಿ, ನಿವೃತ್ತ ಭೂ ಸೇನಾನಿ ಡಿ. ರಾಮ ಮೂಲ್ಯ ದೇಲಂತಬೆಟ್ಟು, ನಿವೃತ್ತ ಯೋಧರಾದ ಡಿ. ಶಿವರಾಮ ರಾವ್ ದೇಲಂತಬೆಟ್ಟು, ಸಿ ಎಚ್ ರಾಮಚಂದ್ರ ಭಟ್, ಡಿ. ವೆಂಕಪ್ಪ ಮೂಲ್ಯ ಕನ್ಯಾನ, ದುಗ್ಗಪ್ಪ ಮೂಲ್ಯ ಅಂಗ್ರಿ, ಎಂಟೆಕ್‌ನಲ್ಲಿ ಚಿನ್ನದ ಪದಕ ವಿಜೇತ ಶ್ರೀಷ ರಾವ್ ಡಿ ಎಸ್ ಅವರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಎಂ. ಬಾಲಕೃಷ್ಣ ರಾವ್, ಉದ್ಯಮಿ ಚಂದ್ರಕಲಾ ಪೈ, ನಿವೃತ್ತ ಬ್ಯಾಂಕ್ ಅಧಿಕಾರಿ ಕೆ ಗಣೇಶ್ ಭಕ್ತಾ, ಕನ್ಯಾನ ಭಾರತ ಸೇವಾಶ್ರಮದ ಗೌರವಾಧ್ಯಕ್ಷ ಧರ್ಮದರ್ಶಿ  ಹರಿಕೃಷ್ಣ ಪುನರೂರು, ಉಪಾಧ್ಯಕ್ಷ ಡಾ. ಆರ್. ಎನ್ ಶಾಸ್ತ್ರಿ, ಜತೆ ಕಾರ್ಯದರ್ಶಿ ಸರಿತಾ ಭಟ್, ಸರೋಜಿನಿ ಭಟ್ಟಾಚಾರ್ಯ, ಶಂಕರ ಭಟ್ಟಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಸೇವಾಶ್ರಮದ ಕಾರ್ಯದರ್ಶಿ ಎಸ್ ಈಶ್ವರ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪರಶುರಾಮ ವರದಿ ವಾಚಿಸಿದರು. ಅಧ್ಯಕ್ಷ ಡಿ. ಅನಂತ ಪೈ ವಂದಿಸಿದರು. ವರಲಕ್ಷ್ಮೀ ಹಾಗೂ ವೇದವ್ಯಾಸ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕನ್ಯಾನ ಭಾರತ ಸೇವಾಶ್ರಮದಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*