ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವ ಶನಿವಾರ ಮಕರ ಸಂಕ್ರಮಣದ ಪರ್ವದಿನದಂದು ಆರಂಭಗೊಂಡಿತು. ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯುವುದರೊಂದಿಗೆ ಜಾತ್ರೋತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಸಂಜೆ ಲಕ್ಷದೀಪೋತ್ಸವ, ರಾತ್ರಿ ಉತ್ಸವ ಬಲಿ ನಡೆಯುತ್ತದೆ.
15, 16, 17ರಂದು ಸಂಜೆ 6.30ಕ್ಕೆ ನಿತ್ಯೋತ್ಸವಗಳು ನಡೆಯುವುದು.
18ರಂದು ಬುಧವಾರ ರಾತ್ರಿ 8.30ಕ್ಕೆ ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ಬರುತ್ತದೆ. ರಾತ್ರಿ 9ಕ್ಕೆ ಬಯ್ಯದ ಬಲಿ ಉತ್ಸವ ನಡೆಯಲಿದೆ. 19 ಗುರುವಾರ ಬೆಳಗ್ಗೆ 9.30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ, ರಾತ್ರಿ 8ಕ್ಕೆ ತೆಪ್ಪೋತ್ಸವ ನಡೆಯಲಿದೆ. ಅಂದು ನಡುದೀಪೋತ್ಸವ ನಡೆಯುವುದು. 20ಕ್ಕೆ ರಾತ್ರಿ 9ಕ್ಕೆ ಹೂತೇರು ಉತ್ಸವ. 21ರಂದು ಶನಿವಾರ ಮಹಾರಥೋತ್ಸವ ನಡೆಯಲಿದೆ.
ಅಂದು ಬೆಳಗ್ಗೆ 9.30ಕ್ಕೆ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ, ಪ್ರಸಾದ ವಿತರಣೆ. ರಾತ್ರಿ 7.30ಕ್ಕೆ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಬರುವುದು. ರಾತ್ರಿ 8ಕ್ಕೆ ಮಹಾರಥೋತ್ಸವ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಲಿದೆ.
22ರಂದು ಅವಭೃತ ಸ್ನಾನ, 24ರಂದು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ. 25ರಂದು ಅರಮನೆಯಲ್ಲಿ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಬಳಿಕ ಕೇಪುವಿಗೆ ಭಂಡಾರ ಹೊರಡುವುದು ನಡೆಯಲಿದೆ.
Be the first to comment on "ವಿಟ್ಲ ಜಾತ್ರೋತ್ಸವ ಆರಂಭ, ಧ್ವಜಾರೋಹಣ"