ಫರಂಗಿಪೇಟೆ

ಫರಂಗಿಪೇಟೆ: ನಮ್ಮ ಆರ್ಯುವೇದದಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ

ಫರಂಗಿಪೇಟೆ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ  ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ  ರವಿವಾರ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು.

www.bantwalnews.com report

ಜಾಹೀರಾತು

ಶಿಬಿರವನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕ್ರಷ್ಣ ಕುಮಾರ್ ಪೂಂಜ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದ ವೈದರಾದ ಡಾ. ಮಹೇಶ್ ಟಿ.ಎಸ್., ಡಾ. ಶ್ರೀವಿದ್ಯಾ ಎಂ., ಫರಂಗಿಪೇಟೆ ಶ್ರೀಲಕ್ಷ್ಮಿ ಕ್ಲಿನಿಕಲ್ ಲ್ಯಾಬ್ ಮಾಲೀಕರಾದ ಧನಲಕ್ಷ್ಮಿ, ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರಾಜಶ್ರೀ, ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ, ಪ್ರಮುಖರಾದ ಮುಹಮ್ಮದ್ ಹುಸೈನ್ ಉಪಸ್ಥಿತರಿದ್ದರು.

ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಈ ಶಿಬಿರದಲ್ಲಿ ಫರಂಗಿಪೇಟೆ ಮತ್ತು ಸುತ್ತಮುತ್ತಲಿನ ಹಲವಾರು ಮಂದಿ ಮಧುಮೇಹ ತಪಾಸಣೆ ನಡೆಸುವ ಮೂಲಕ ಶಿಬಿರದ ಪ್ರಯೋಜನ ಪಡೆದರು. ಪತ್ರಕರ್ತ ಹರೀಶ್ ಮಾಂಬಾಡಿ ಸ್ವಾಗತಿಸಿ, ವಂದಿಸಿದರು.

 

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts