ಗಾಂಜಾ ಸೇಲ್ ಮಾಡುತ್ತಿದ್ದ ಮತ್ತೆರಡು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ವಿಟ್ಲ ಪರಿಸರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದು.
https://bantwalnews.comreport
ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ಮಹಮ್ಮದ್ ಅಶ್ರಫ್(22) ಹಾಗೂ ಕೇಪು ಗ್ರಾಮದ ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್(35) ಎಂಬಿಬ್ಬರನ್ನು ಅಪರಾಧ ಪತ್ತೆದಳ ಪೊಲೀಸರು ಬಂಧಿಸಿ ವಿಟ್ಲ ಪೊಲೀಸರ ವಶಕ್ಕೆ ಭಾನುವಾರ ಒಪ್ಪಿಸಿದರು. ಇವರಿಂದ 100 ಗ್ರಾಂ ಗಾಂಜಾ, ಎರಡು ಮೊಬೈಲ್ ಹಾಗೂ ಒಂದು ಪಲ್ಸರ್ ಬೈಕ್ ಸೇರಿದಂತೆ 57, 650 ಮೌಲ್ಯದ ಸ್ವತ್ತುಗಳನ್ನು ವಶಪಡಿಸಲಾಗಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಜಿಲ್ಲಾ ಎಸ್.ಪಿ ಭೂಷಣ್ ರಾವ್ ಬೊರಸೆ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ರವೀಶ್ ಸಿ.ಆರ್ ಅಪರಾಧ ಪತ್ತೆ ದಳದ ಪೊಲೀಸ್ ಇನ್‌ಸ್ಪೆಕ್ಟರ್ ಅಮಾನುಲ್ಲಾ ಹಾಗೂ ಡಿಸಿಐಬಿ ಘಟಕದ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿಸಿ ವಿಟ್ಲ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ವಿಟ್ಲ ಪೊಲೀಸರ ತಂಡ ಕನ್ಯಾನ ಹಾಗೂ ವಿಟ್ಲದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಶಾಫಿ ಹಾಗೂ ಅರ್ಮನ್ ಎಂಬ ಇಬ್ಬರನ್ನು ಕಾನತ್ತಡ್ಕ ಎಂಬಲ್ಲಿ ಬಂಧಿಸಿ ಅವರಿಂದ 13 ಕೆ.ಜಿ ಗಾಂಜಾವನ್ನು ವಶಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇವರ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಇವರಿಗೆ ಶಾಫಿ ಹಾಗೂ ಅರ್ಮಾನ್ ಗಾಂಜಾ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.
ಶಾಫಿ ಹಾಗೂ ಅರ್ಮಾನ್‌ಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Be the first to comment on "ವಿಟ್ಲ ಕಾಲೇಜು ಬಳಿಯೇ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ"