ಅಳಕೆಮಜಲು ಸಮೀಪ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ (70) ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.

www.bantwalnews.com report

ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ(70) ಮೃತಪಟ್ಟವರು. ಇವರು ಸೋಮವಾರ ರಾತ್ರಿ ಕೋಲ್ಪೆ ಸಮೀಪ ಇರುವ ತನ್ನ ಮಗಳ ಮನೆಯಿಂದ ಅಳಕೆಮಜಲು ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಳಕೆಮಜಲು ಕಡೆಯಿಂದ ಕೋಲ್ಪೆ ಕಡೆಗೆ ತೆರಳುತ್ತಿದ್ದ ಬೈಕ್ ಪಿಕಪ್ ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ರಾಮಣ್ಣ ಗೌಡರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎದೆಗೆ ಹಾಗೂ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಳಕೆಮಜಲು ಸಮೀಪ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*