ಬಂಟ್ವಾಳ

ಮಿಲಿಟ್ರಿ ಖಾದ್ರಿಯಾಕ ನಿಧನ

bantwalnews.com report

ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ನಿವೃತ್ತ ಯೋಧ ಅಬ್ದುಲ್ ಖಾದರ್ ಯಾನೆ ಮಿಲಿಟ್ರಿ ಖಾದ್ರಿಯಾಕ(77) ಭಾನುವಾರ ಮುಂಜಾನೆ ಸ್ವ ಗೃಹದಲ್ಲಿ ಹೃದಯಾಘಾತದಿಂದ ಮೃತರಾಗಿದ್ದಾರೆ.

1961ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಅವರು ಇಂಡೋ – ಟಿಬೇಟ್ ಯುದ್ಧದ ಸಮಯದಲ್ಲಿ ಸೇನೆಯಲ್ಲಿ ಬ್ರಿಗೇಡಿಯರ್ ಆಗಿ ಸೇವೆ ಸಲ್ಲಿಸಿದ್ದರು.

ಜಾಹೀರಾತು

ನಿವೃತ್ತ ಹೆಡ್ ಕಾನ್‌ಸ್ಟೇಬಲ್ ನೆಹರೂ ನಗರ ನಿವಾಸಿ ಕೆ.ಅಬ್ದುಲ್ ಹಮೀದ್ ಅವರ ಸಹೋದರರಾಗಿರುವ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

……………………………….
ಬಾಬು ಗೌಡ ಮತ್ತಾವು
ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಮತ್ತಾವು ನಿವಾಸಿ, ಪ್ರಗತಿಪರ ಕೃಷಿಕ ಬಾಬು ಗೌಡ (82) ಇವರು ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿದ್ದು, ಉತ್ತಮ ಹೈನುಗಾರರಾಗಿಯೂ ಗುರುತಿಸಿಕೊಂಡಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts