www.bantwalnews.com report
ವಿದ್ಯುತ್ ತಂತಿ ಮೈಮೇಲೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ.
ಇಲ್ಲಿನ ನಿವಾಸಿ ಕೃಷಿಕ ಸಂಜೀವ ಮಡಿವಾಳ ಎಂಬವರ ಪುತ್ರ ತಿಲಕ್ ಯಾನೆ ಯುವರಾಜ್(25) ಘಟನೆಯಿಂದ ಗಾಯಗೊಂಡವರು.
ಇಂದು ಬೆಳಗ್ಗೆ ಯುವರಾಜ್ ಮನೆಯಂಗಳದಲ್ಲಿದ್ದಾಗ ಆವರ ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಯುವರಾಜ್‌ನ ಭುಜದ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಅಸ್ವಸ್ಥಗೊಂಡು ಅಂಗಲದಲ್ಲಿ ಕುಸಿದು ಬಿದ್ದ ಅವರನ್ನು ಕೂಡಲೇ ಮನೆಯವರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯುತ್ ತಂತಿ ಬಿದ್ದ ಬಗ್ಗೆ ಸ್ಥಳೀಯರು ಬಂಟ್ವಾಳ ಮೆಸ್ಕಾಂಗೆ ಮಾಹಿತಿ ನೀಡಿದ್ದು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತೆರವುಗೊಳಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…