ಉಕ್ಕುಡದಲ್ಲಿ ನಿಯಂತ್ರಣ ತಪ್ಪಿದ ಕಾರು, ಇಬ್ಬರು ಸಾವು

bantwalnews.com

ವಿಟ್ಲ ಸಮೀಪ ಉಕ್ಕುಡ ಚೆಕ್ ಪೋಸ್ಟ್ ಬಳಿ ಸೋಮವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.

bantwalnews.com report

ಜಾಹೀರಾತು

ಕಡಂಬು ಸಮೀಪದ ಬದಿಯಾರು ನಿವಾಸಿ ಸುಲೇಮಾನ್ ಹಾಜಿ (60) ಮತ್ತು ಅವರ ಮೊಮ್ಮಗು ಶಹಜಾನ್ (ಮೂರು ತಿಂಗಳು) ಸಾವನ್ನಪ್ಪಿದವರು.

ಸುಲೇಮಾನ್ ಕುಟುಂಬ ವಿಟ್ಲ ಸಮೀಪದ ಕಡಂಬುವಿನಿಂದ ವಿಟ್ಲ ಮಾರ್ಗವಾಗಿ ಪುಣಚಕ್ಕೆ ಸಂಬಂಧಿಕರ ಹುಟ್ಟುಹಬ್ಬ ಪಾರ್ಟಿಗೆಂದು ಮಾರುತಿ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾರು ಉಕ್ಕುಡ ಚೆಕ್ ಪೋಸ್ಟ್ ಸಮೀಪ ಬಂದಾಗ ಇದ್ದಕ್ಕಿದ್ದಂತೆ ಬಲಕ್ಕೆ ತಿರುಗಿ ನಿಯಂತ್ರಣ ಕಳೆದುಕೊಂಡಿತು. ಈ ಸಂದರ್ಭ ಅಲ್ಲಿದ್ದ ಬರೆಗೆ ಡಿಕ್ಕಿ ಹೊಡೆಯಿತು.

ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಎಂಟು ಮಂದಿಯೂ ಗಾಯಗೊಂಡರು. ಅವರಲ್ಲಿ ಸುಲೇಮಾನ್ ಹಾಜಿ ಮತ್ತು ಸಜನ್ ಆಸ್ಪತ್ರೆಯಲ್ಲಿ ಮೃತಪಟ್ಟರು. ತೀವ್ರ ಗಾಯಗೊಂಡಿರುವ ಚಾಲಕನೂ ಸೇರಿದಂತೆ ನಾಲ್ವರು ಮಹಿಳೆಯರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಉಕ್ಕುಡದಲ್ಲಿ ನಿಯಂತ್ರಣ ತಪ್ಪಿದ ಕಾರು, ಇಬ್ಬರು ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*