www.bantwalnews.com report
ಬಂಟ್ವಾಳ ತಾಲೂಕು ಮಟ್ಟದ ಅಂಬೇಡ್ಕರ್ ಭವನ ಮತ್ತು ಹೋಬಳಿ ಮಟ್ಟದ ಅಂಬೇಡ್ಕರ್ ಭವನದ ಶಿಲಾನ್ಯಾಸ ಜ.17ರಂದು ಬಿ.ಸಿ.ರೋಡು ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಬಳಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಹೆಚ್. ಆಂಜನೇಯ ಶಂಕುಸ್ಥಾಪನೆಯನ್ನು ಮಾಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಆಹಾರ ಸಚಿವರಾದ ಯು. ಟಿ. ಖಾದರ್ ಹಾಗೂ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ನ ಶಾಸಕ ಐವನ್ ಡಿ’ಸೋಜ, ವಿಧಾನ ಪರಿಷತ್ ವಿರೋಧ ಪಕ್ಷದ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪುತ್ತೂರು ಶಾಸಕಿ ಶಕುಂತಲಾ. ಟಿ. ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತು ಶಾಸಕ ಕೆ. ಪ್ರತಾಪಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಹೆಚ್. ಖಾದರ್, ಬಂಟ್ವಾಳ ತಾ. ಪಂ ಅಧ್ಯಕ್ಷ ಕೆ.ಚಂದ್ರಹಾಸ ಕರ್ಕೇರಾ, ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ತಾ.ಪಂ ಉಪಾಧ್ಯಕ್ಷ ಬಿ. ಎಂ. ಅಬ್ಬಾಸ್ ಅಲಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬಂಟ್ವಾಳ ಸಾಮಾಜಿಕ ನ್ಯಾಯ ಸಮಿತಿ ತಾ. ಪಂ. ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ದ.ಕ. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ.ಆರ್.ರವಿ, ಪೋಲಿಸ್ ಅಧೀಕ್ಷಕ ಭೂಷಣ್ ಗುಲಾಬ್ ರಾವ್ ಬೊರಸೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್, ಯೋಜನಾ ಸಮನ್ವಯಾಧಿಕಾರಿ ಡಾ. ಬಿ. ಎಸ್. ಹೇಮಲತಾ ಭಾಗವಹಿಸಲಿದ್ದಾರೆ.