ಬೆಳಗ್ಗೆ 9.30 ಮಂಗಳೂರು ದೇರೆಬೈಲ್‌ನಲ್ಲಿ ಅಂಬೇಡ್ಕರ್ ಭವನ ಹಾಗೂ ಗಡಿ ಪ್ರದೇಶದ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 10.15ಕ್ಕೆ – ಮಂಗಳೂರು ಉರ್ವ ಮೆಟ್ರಿಕ್ ನಂತರದ ಬಾಲಕಿಯರ ವಿದಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು. 11ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಬಳಿ ಅಂಬೇಡ್ಕರ್ ಭವನದ ಶಿಲಾನ್ಯಾಸ ಹಾಗೂ ಗಡಿ ಪ್ರದೇಶ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮಧ್ಯಾಹ್ನ 1ಕ್ಕೆ ಪುತ್ತೂರು ದರ್ಬೆ ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕರ ಕಛೇರಿಯ ಉದ್ಘಾಟನಾ ಸಮಾರಂಭ ಹಾಗೂ ಗಡಿಪ್ರದೇಶದ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವುದು. 3ಕ್ಕೆ ಸುಳ್ಯ ಗಾಂಧಿ ನಗರ ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕರ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವುದು.