ಬಿಜೆಪಿಯಿಂದ ಭವ್ಯರಾಣಿ ಅನಂತಾಡಿ ಸನ್ಮಾನ

ಲೋಕಕಲ್ಯಾಣದ ಕೆಲಸವನ್ನು ನಿಸ್ವಾರ್ಥವಾಗಿ ಮಾಡಿದರೆ ಅದು ನಿಜವಾದ ಸಮಾಜಸೇವೆ , ಅ ಕೆಲಸವನ್ನು ಭವ್ಯ ರಾಣಿ ಮಾಡಿದ್ದಾರೆ. ಹಾಗಾಗಿ ಅವರು ಇತರಿಗೆ ಮಾದರಿ ಎಂದು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು.

www.bantwalnews.com report

ಜಾಹೀರಾತು

ತುಮಕೂರು ಜಿಲ್ಲೆಯ ತುರುವೆಕೆರೆ ಎಂಬಲ್ಲಿ 300 ಕ್ಕೂ ಅಧಿಕ ಶೌಚಾಲಯವನ್ನು ನಿರ್ಮಿಸಿದ ರಾಜ್ಯ ಬಿಜೆಪಿ ಮಹಿಳಾ ಯುವಮೋರ್ಚಾದ ಕಾರ್‍ಯಕಾರಿಣಿ ಸದಸ್ಯೆ ಭವ್ಯ ರಾಣಿ ಅವರನ್ನು ಅವರ ಅನಂತಾಡಿ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನಿಸಿ ಮಾತನಾಡಿದರು.

ಮಾಜಿ ಶಾಸಕರಾದ ರುಕ್ಮಯ ಪೂಜಾರಿ , ಪದ್ಮನಾಭ ಕೊಟ್ಟಾರಿ, ಬೆಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಪಕ್ಷದ ಪ್ರಮುಖರಾದ ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ಪೂಜಾ ಪೈ, ಸಂದ್ಯಾ ವೆಂಕಟೇಶ್, ಸುಗುಣಾ ಕಿಣಿ, ರಜನಿ ದುಗ್ಗಣ್ಣ, ಶೈಲಜಾ ಕೆ.ಟಿ ಭಟ್, ಗೀತಾ ಚಂದ್ರಶೇಖರ್, ಚೆನ್ನಪ್ಪ ಕೋಟ್ಯಾನ್, ಜಿತೇಂದ್ರ ಕೊಟ್ಟಾರಿ, ರಾಮ್‌ದಾಸ ಬಂಟ್ವಾಳ, ವಜ್ರನಾಥ ಕಲ್ಲಡ್ಕ, ನೇಮಿರಾಜ್ ರೈ, ದಿನೇಶ್ ಅಮ್ಟೂರು, ಜಿ ಆನಂದ, ಸನತ್ ರೈ, ಹರೀಶ್ ಮೂಡುಶೆಡ್ಡೆ, ಶಶಾಂಕ್ ಆಚಾರ್ಯ, ಚಂದಪ್ಪ ಮಾಸ್ಟರ್, ರಂಜಿತ್ ಮೈರ ಮತ್ತಿತತರು ಉಪಸ್ಥಿತರಿದ್ದರು.  ರಾಜ್ಯ ಸಹ ವಕ್ತಾರೆ ಸುಲೋಚನಾ ಜಿಕೆ ಭಟ್ ಪ್ರಸ್ತಾವನೆಗೈದು ಸ್ವಾಗತಿಸಿದರು, ಅನಂತಾಡಿ ಗ್ರಾ.ಸಮಿತಿ ಕಾರ್‍ಯದರ್ಶಿ ದಿನೇಶ್ ವಂದಿಸಿದರು. ಮಣಿಮಾಲಾ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿಜೆಪಿಯಿಂದ ಭವ್ಯರಾಣಿ ಅನಂತಾಡಿ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*