ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ ) ಅಧ್ಯಕ್ಷರನ್ನಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರನ್ನು ನಾಮ ನಿರ್ದೇಶನ ಮಾಡಿ ಕರ್ನಾಟಕ ಸರಕಾರ ಆದೇಶಿಸಿದೆ.
https://bantwalnews.com report
ದ.ಕ. ಜಿಲ್ಲೆಯ ಪ್ರಭಾವೀ ಹಿರಿಯ ಕಾಂಗ್ರೆಸ್ಸಿಗ ಬೆಳ್ಳಿಪ್ಪಾಡಿ ಸಂಕಪ್ಪ ರೈ ಅವರ ಮೊಮ್ಮಗನಾಗಿರುವ ಇವರು ಪುತ್ತೂರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ , ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮತ್ತು ಹತ್ತು ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಈ ಆದೇಶ ಹೊರಡಿಸಿದೆ.
ರಾಜ್ಯದ ಒಟ್ಟು 17 ನಗರ ಸಭೆ ವ್ಯಾಪ್ತಿಯ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಮೂಡುಬಿದರೆ ಸೇರಿದೆ. ಮೂಡುಬಿದರೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಸುರೇಶ್ ಪ್ರಭು ಅವರನ್ನು ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…