ಜಿಲ್ಲಾ ಸುದ್ದಿ

ಪುಡಾ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ ) ಅಧ್ಯಕ್ಷರನ್ನಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರನ್ನು ನಾಮ ನಿರ್ದೇಶನ ಮಾಡಿ ಕರ್ನಾಟಕ ಸರಕಾರ  ಆದೇಶಿಸಿದೆ.

https://bantwalnews.com report

ಜಾಹೀರಾತು

ದ.ಕ. ಜಿಲ್ಲೆಯ ಪ್ರಭಾವೀ ಹಿರಿಯ ಕಾಂಗ್ರೆಸ್ಸಿಗ ಬೆಳ್ಳಿಪ್ಪಾಡಿ ಸಂಕಪ್ಪ ರೈ ಅವರ ಮೊಮ್ಮಗನಾಗಿರುವ ಇವರು ಪುತ್ತೂರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ , ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮತ್ತು ಹತ್ತು ಹಲವು ಸಾಮಾಜಿಕ ಸಂಘಟನೆಗಳಲ್ಲಿ  ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಈ ಆದೇಶ ಹೊರಡಿಸಿದೆ.

ರಾಜ್ಯದ ಒಟ್ಟು 17 ನಗರ ಸಭೆ ವ್ಯಾಪ್ತಿಯ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ  ಮೂಡುಬಿದರೆ ಸೇರಿದೆ. ಮೂಡುಬಿದರೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಸುರೇಶ್ ಪ್ರಭು ಅವರನ್ನು ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ