ಬಂಟ್ವಾಳ

ರಾಜ್ಯಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಸಾಧನೆ

ನಗರ ಪೊಲೀಸ್ ಠಾಣೆಗೆ ಆರು ತಿಂಗಳ ಹಿಂದೆಯಷ್ಟೇ ಪೊಲೀಸ್ ಸಿಬ್ಬಂದಿಯಾಗಿ ನೇಮಕಗೊಂಡ ವನಿತಾ, ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.

www.bantwalnews.com report

ಜಾಹೀರಾತು

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಇವರು 200 ಮೀ. ಓಟ ಮತ್ತು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ. ಓಟ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗೆದ್ದು ಚಾಂಪಿಯನ್‌ಶಿಪ್ ಮೂಲಕ ಗಮನ ಸೆಳೆದಿದ್ದರು.

ಇದೀಗ ತನ್ನ ಪೊಲೀಸ್ ವೃತ್ತಿ ಜೀವನದ ಆರಂಭದಲ್ಲೇ ಕ್ರೀಡಾ ಕ್ಷೇತ್ರದ ಸಾಧನೆ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಬಂಟ್ವಾಳ ನಗರ ಠಾಣೆಗೆ ಕೀರ್ತಿ ತಂದ ಇವರಿಗೆ ಜಿಲ್ಲಾ ಪೊಲೀಸ್ ಎಸ್ಪಿ ಭೂಷಣ್ ಜಿ. ಬೊರಸೆ, ಬಂಟ್ವಾಳ ಡಿವೈಎಸ್ಪಿ ಡಾ. ರವೀಶ್ ಸಿ.ಆರ್., ಸಿಐ ಮಂಜಯ್ಯ, ಎಸ್ಸೈಗಳಾದ ನಂದಕುಮಾರ್, ಎ.ಕೆ.ರಕ್ಷಿತ್ ಗೌಡ ಹಾಗೂ ಅವರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts