ವಿಟ್ಲ

ಆನೆಕಲ್ಲು ಎಯುಪಿ ಶಾಲೆಯಲ್ಲಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಉಚಿತ ಶಿಬಿರ

ಎ ಯು ಪಿ ಶಾಲೆ ಆನೆಕಲ್ಲು ಹಳೆ ವಿಧ್ಯಾರ್ಥಿ ಸಂಘ ಮತ್ತು ಗ್ರಂಥಾಲಯ- ವಾಚನಾಲಯ ನೇತೃತ್ವದಲ್ಲಿ ಶ್ರೀ ಧರ್ಮಚಕ್ರ ಟ್ರಸ್ಟ್ ರಿ., ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಆಶ್ರಯದಲ್ಲಿ ಭಾನುವಾರ ಎ ಯು ಪಿ ಶಾಲೆಯಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ವರ್ಕಾಡಿ ಪಂಚಾಯತ್ ಸದಸ್ಯೆ ಸೀತಾ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಮ್ಮರ್ ಎ. ವಹಿಸಿದ್ದರು. ಡಾ.ಎಂ ಶ್ರೀಧರ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ. ಆನಂದ ನೇತ್ರ ರಕ್ಷಣೆಯ ಮಾಹಿತಿ ನೀಡಿದರು. ಮಂಜೇಶ್ವರ ತಾಲೂಕ್ ಲೈಬ್ರರಿ ಕೌಂಸಿಲ್  ಅಧ್ಯಕ್ಷ ಎಸ್.ನಾರಾಯಣ ಭಟ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಭಟ್,  ಮಂಜೇಶ್ವರ ತಾಲೂಕು ಲೈಬ್ರರಿ ಕೌಂಸಿಲೋರ್ ಶ್ರೀಕುಮಾರಿ, ಪಿಟಿಎ ಅಧ್ಯಕ್ಷರಾದ ಅಶ್ರಫ್ ಶುಭ ಹಾರೈಸಿದರು. ಅಕ್ಷತಾ ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ರಾಮಕೃಷ್ಣ ಭಟ್  ಸ್ವಾಗತಿಸಿದರು. ನಾರಾಯಣರಾಜ ಟಿ.ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು

ಶಿಬಿರದ ಅಂಗವಾಗಿ ಹಳೇ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾಟವನ್ನು ಶನಿವಾರ ಆಯೋಜಿಸಲಾಗಿತ್ತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ