ಬಂಟ್ವಾಳ

ಸಾಧಕ ಪೊಲೀಸ್ ಸಿಬ್ಬಂದಿ ವನಿತಾ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕೀರ್ತಿ ತಂದು ಕೊಟ್ಟ ಇಲ್ಲಿನ ಸಿಬ್ಬಂದಿ ವನಿತಾ ವರನ್ನು ರವಿವಾರ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

www.bantwalnews.com report

ಜಾಹೀರಾತು

ಈ ಸಂದರ್ಭ ಎಸ್ಸೈ ನಂದಕುಮಾರ್ ಎಂ.ಎಂ., ಅಪರಾಧ ವಿಭಾಗದ ಎಸ್ಸೈ ಗಂಗಾದರಪ್ಪ, ಎಎಸ್ಸೈಗಳಾದ ಸಂಜೀವ, ಸೇಶಮ್ಮ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಆರು ತಿಂಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸಿಬ್ಬಂದಿಯಾಗಿ ನೇಮಕಗೊಂಡ ವನಿತಾ, ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡು 200 ಮೀ. ಓಟ ಮತ್ತು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ. ಓಟ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗೆದ್ದು ಚಾಂಪಿಯನ್‌ಶಿಪ್ ಪಡೆದಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts