ಸುಳ್ಯ ತಾಲೂಕಿನ ಐವರ್ನಾಡು ಎಂಬಲ್ಲಿ ಸೋಮವಾರ ಬೆಳಗ್ಗೆ ವ್ಯಾಪಾರಿಯೊಬ್ಬರಿಗೆ ಪಿಸ್ತೂಲು ತಲವಾರು ತೋರಿಸಿ ಐದು ಲಕ್ಷ ರೂ ನಗದು, ಮೊಬೈಲ್ ಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ.
www.banwalnews.com report
ಗುತ್ತಿಗಾರಿನ ಅಡಿಕೆ ವ್ಯಾಪಾರಿ ಪ್ರಗತಿ ಅಬ್ದುಲ್ ಖಾದರ್ ಎಂಬವರು ಇಂದು ಬೆಳಿಗ್ಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ಬರುತ್ತಿದ್ದಾಗ ಐವರ್ನಾಡಿನಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ಸುಮಾರು ಐವರು ದುಷ್ಕರ್ಮಿಗಳು ಪಿಸ್ತೂಲ್, ತಲವಾರು ತೋರಿಸಿ ಕಾರಲ್ಲಿದ್ದ 5 ಲಕ್ಷ ರೂ ನಗದು ಹಾಗೂ ಮೊಬೈಲ್‌ಗಳನ್ನು ದೋಚಿ ದರು.
ಅಡಿಕೆ ವ್ಯಾಪಾರಿ ಅಬ್ದುಲ್ ಖಾದರ್ ರವರು ತನ್ನ ಮಿತ್ರ ಮತ್ತು ಕೆಲಸದ ಇಬ್ಬರೊಂದಿಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ತನ್ನ ಕಾರಲ್ಲಿ ಹೊರಟಿದ್ದರು. ಕಾರು ಐವರ್ನಾಡು ತಲುಪುವ ವೇಳೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದ ಕಾರೊಂದು ಇವರ ಕಾರಿನ ಮುಂದೆ ಹೋಗಿ ಅಡ್ಡ ನಿಂತಿತು. ಅದರಿಂದ ಇಳಿದವರು ಪಿಸ್ತೂಲ್ ಮತ್ತು ತಲವಾರು ತೋರಿಸಿ ಕಾರಲ್ಲಿದ್ದ ನಗದು, ಚೆಕ್ ಬುಕ್, ಮೊಬೈಲ್‌ಗಳನ್ನು ಕಿತ್ತುಕೊಂಡು ಬೆಳ್ಳಾರೆ ಕಡೆಗೆ ಹೋಗಿದ್ದಾರೆ ಎಂದು ಹೇಳಲಾಗಿದೆ. ವಿಷಯ ತಿಳಿದ ಸುಳ್ಯ ಪೋಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಜಿಲ್ಲಾ ಎಸ್ಪಿ ಭೂಷಣ್ ಬೊರಸೆ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲು ಸೂಚಿಸಿದ್ದಾರೆ. ಆಗಂತುಕರು ಹಿಂದಿ ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು, ತನಿಖೆ ಸಾಗಿದೆ.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)