www.bantwalnews.com report
ಕಲ್ಲಡ್ಕ ಸಮೀಪ ಬೋಳಂತೂರು ಕ್ರಾಸ್ ಬಳಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಚಾಲಕನ ಮೇಲೆ ಹಲ್ಲೆ ಹಾಗೂ ಹಲ್ಲೆ ನಡೆಸಿದವರ ಮೇಲೆ ಪ್ರತಿಹಲ್ಲೆಗಳು ನಡೆದಿದೆ ಎಂಬ ಮಾಹಿತಿ ತಿಳಿದ ಬಂಟ್ವಾಳ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಬಂದೋಬಸ್ತ್ ಕೈಗೊಂಡರು. ಇದೊಂದು ಸಣ್ಣ ಘಟನೆಯಾಗಿದೆ ಎಂದು ಹೆಚ್ಚಿನ ಮಾಹಿತಿಯನ್ನು ಸುದ್ದಿಗಾರರಿಗೆ ನೀಡಲು ಬಂಟ್ವಾಳ ಡಿವೈಎಸ್ಪಿ ನಿರಾಕರಿಸಿದರು.
ಎಸ್ಪಿ ಭೂಷಣ್ ಜಿ. ಬೊರಸೆ ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆ ಹಾಗೂ ವಿಟ್ಲ ಠಾಣಾ ಎಸ್ಸೈಗಳ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…