ಬಂಟ್ವಾಳ

ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

4.5 ಮೀಟರ್ ನೀರು ಸಂಗ್ರಹಿಸಿದಾಗ ಮುಳುಗಡೆಯಾಗುವ ಪ್ರದೇಶಕ್ಕೆ ಈ ವರ್ಷವೇ ನ್ಯಾಯೋಚಿತ ಪರಿಹಾರ. 5 ಮೀಟರ್ ನೀರು ಸಂಗ್ರಹಿಸಿದ ಸಂದರ್ಭ ಸಂತ್ರಸ್ತ ರೈತರಿಗೆ ಅದೇ ವರ್ಷ ಶಾಶ್ವತ ಪರಿಹಾರ.

www.bantwalnews.com report

ಜಾಹೀರಾತು

ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಸಮ್ಮುಖ ಅರಣ್ಯ ಸಚಿವ ಬಿ.ರಮಾನಾಥ ರೈ ಜೊತೆ ತೆರಳಿದ ನಿಯೋಗಕ್ಕೆ ಈ ಭರವಸೆ ನೀಡಲಾಗಿದೆ.

ತುಂಬೆ ನೂತನ ವೆಂಟೆಡ್ ಡ್ಯಾಂನಲ್ಲಿ ಸಂಗ್ರಹಿಸುವ ನೀರಿನಿಂದ ಒಟ್ಟು 488 ಎಕ್ರೆ ಜಮೀನು ಮುಳುಗಡೆಯಾಗುವ ಬಗ್ಗೆ ಈಗಾಗಲೇ ಸರ್ವೆ ನಡೆಸಲಾಗಿದ್ದು, ಈ ಜಮೀನುಗಳ ಸಂತ್ರಸ್ತರಿಗೆ ಒಟ್ಟು ಪರಿಹಾರ ಮೊತ್ತ 125 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಪರಿಹಾರ ಮೊತ್ತವನ್ನು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಹಣಕಾಸು ಇಲಾಖೆ ಜಂಟಿಯಾಗಿ ಠೇವಣಿ ಇಟ್ಟು ವಿತರಿಸುವುದು ಎಂಬ ತೀರ್ಮಾನಕ್ಕೂ ಸಭೆಯಲ್ಲಿ ಬರಲಾಗಿದೆ.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಕುಂಟಿ, ನಗರಾಭಿವೃದ್ದಿ ಇಲಾಖೆ ಅಪರ ಕಾರ್ಯದರ್ಶಿ ಪೊನ್ನುರಾಜ್, ಹಣಕಾಸು ಯೋಜನೆ ಇಲಾಖೆ ಕಾರ್ಯದರ್ಶಿ ಅರವಿಂದ ಶ್ರೀವಾಸ್ತವ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣ ರೆಡ್ಡಿ, ರಾಜ್ಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಪದನಿಮಿತ್ತ ಆಯುಕ್ತ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕ ಶಿವಸ್ವಾಮಿ ಕಳಸದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಜಗದೀಶ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಕಾರ್ಯನಿರ್ವಾಹಕ ಇಂಜಿನಿಯರ್ ಮಳವಳ್ಳಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.

ಸಂತ್ರಸ್ತ ರೈತರ ಪರವಾಗಿ ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಜಿಪಮುನ್ನೂರು ಗ್ರಾ ಪಂ ಸದಸ್ಯರಾದ ಯೂಸುಫ್ ಕರಂದಾಡಿ, ಅಹ್ಮದ್ ಕಬೀರ್, ಗ್ರಾ ಪಂ ಮಾಜಿ ಅಧ್ಯಕ್ಷ ಎಂ ಪರಮೇಶ್ವರ, ಸಂತ್ರಸ್ತ ರೈತರಾದ ಇಕ್ಬಾಲ್ ಪಡ್ಪು, ಕೆ ಎಂ ಅಬ್ದುಲ್ ರಹಿಮಾನ್ ಉದ್ದೋಟ್ಟು, ಆದಂ ಬಾಳಿಕೆ, ಧನಂಜಯ ಶೆಟ್ಟಿ ಪರಾರಿ, ಮುಹಮ್ಮದ್ ರಫೀಕ್ ಕರಂದಾಡಿ, ಹಸನಬ್ಬ ಉದ್ದೊಟ್ಟು, ಅಬ್ದುಲ್ ಕರೀಂ ಮೊದಲಾದವರು ಉಸ್ತುವಾರಿ ಸಚಿವರ ನಿಯೋಗದಲ್ಲಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.