ಬಂಟ್ವಾಳ

ನಾವೇ “ಕಾನೂನು’’ಗಳಾಗಬಾರದು

ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ’ಮಾನವ ಹಕ್ಕುಗಳು – ವಿವಾದಗಳು ಮತ್ತು ಕಾಳಜಿ’ ಎಂಬ ವಿಷಯದ ಕುರಿತ ರಾಷ್ಟ್ರ ಮಟ್ಟದ ಯುಜಿಸಿ ಪ್ರಾಯೋಜಿತ ಒಂದು ದಿನದ ವಿಚಾರ ಸಂಕಿರಣ ನಡೆಯಿತು.

www.bantwalnews.com report

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ನಿಕಟಪೂರ್ವ ಉಪಕುಲಪತಿ ಪ್ರೊ.ಜಿ.ಆರ್.ಜಗದೀಶ್ ಉದ್ಘಾಟಿಸಿದರು. ಅವರು ಮಾತನಾಡಿ, ಮಾನವ ಹಕ್ಕುಗಳು ವ್ಯಕ್ತಿ ಮತ್ತು ಸಮಾಜದ ಹಿತಕ್ಕೆ ಪೂರಕವಾದುದು ಆದರೆ, ನಾವೇ ಕಾನೂನುಗಳಾಗಬಾರದು ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಡಾ| ಪಿ.ಎಲ್ ಧರ್ಮ ಮಾತನಾಡಿ ಪ್ರತಿಯೊಬ್ಬರಲ್ಲೂ ಈ ಕುರಿತು ಅರಿವು ಮೂಡಿಸುವ ವಿಚಾರ ಸಂಕಿರಣಗಳು ನಡೆಯುತ್ತಿರಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್‌ ಅತಿಥಿಗಳನ್ನು ಪರಿಚಯಿಸಿ, ಎಲ್ಲರನ್ನೂ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಯೋಜಕರು ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪ್ರೇಮಲತಾ ಪೈ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಚಾರ ಸಂಕಿರಣದ ಸಹ ಸಂಯೋಜಕರಾದ ಪ್ರೊ. ನಾರಾಯಣ ಭಂಡಾರಿ ವಂದಿಸಿದರು. ಉಪನ್ಯಾಸಕಿ ರಶಿತಾ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶ್ರೀಮತಿ ರೂಪ ಸಹಕರಿಸಿದರು. ಕು.ಗಾಯನ ಪ್ರಭು ಪ್ರಾರ್ಥಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ