ಬಂಟ್ವಾಳ ತಾಲೂಕಿನ ಮೂರು ಗ್ರಾಮಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಬುಧವಾರ ಚಾಲನೆ ನೀಡಲಾಯಿತು.
ಬಂಟ್ವಾಳನ್ಯೂಸ್ ವರದಿ
ಬಿ.ಸಿ.ರೋಡ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿ ನೆರವೇರಿಸಲಾಯಿತು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್, ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸಿದರು.
ಚುನಾವಣಾ ಉಪತಹಶೀಲ್ದಾರ್ ಪರಮೇಶ್ವರ ನಾಯಕ್ ಸಂಸ್ಥಾಪನಾ ದಿನದ ಮಹತ್ವವನ್ನು ವಿವರಿಸಿದರು. ಈ ಸಂದರ್ಭ ಉಪತಹಶೀಲ್ದಾರ್ ಗಳಾದ ಭಾಸ್ಕರ್ ರಾವ್, ಲಲಿತಾ ಶೆಟ್ಟಿ, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ.ಕೆ , ಪ್ರಮುಖರಾದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಕೇಶವ ದೈಪಲ ಉಪಸ್ಥಿತರಿದ್ದರು. ಬಿ.ಮೂಡ , ಬಂಟ್ವಾಳ ಕಸ್ಬಾ, ಪಾಣೆಮಂಗಳೂರು ಗ್ರಾಮ ವ್ಯಾಪ್ತಿಯ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.