ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತು ಯೋಜನೆಯಡಿ ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಕಾಮಾಗಾರಿಯನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಶ್ರೀ ಏಕಗಮ್ಯಾನಂದ ಸ್ವಾಮೀಜಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
www.bantwalnews.com report
ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲೆ ನಿರ್ಮಾಣಗೊಳ್ಳುತ್ತಿರುವ ಬಗ್ಗೆ ಗುರುವಾರ ಮಾಹಿತಿ ಪಡೆದುಕೊಂಡ ಅವರು ಶಾಲೆಯನ್ನು ನೋಡುವ ಇಂಗಿತ ವ್ಯಕ್ತಪಡಿಸಿ ಸಂಜೆಯ ವೇಳೆಗೆ ಶಾಲೆಗೆ ಭೇಟಿ ನೀಡಿದರು.
ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಅಂಚನ್ ಶಾಲೆ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಕಾರ್ಯ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಮಂಗಳೂರಿನ ಉದ್ಯಮಿಗಳಾದ ದಿಲ್‌ರಾಜ್ ಆಳ್ವ, ಉಮಾನಾಥ ಕೋಟೆಕಾರ್, ಪ್ರಕಾಶ್ ಗರೋಡಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪೂವಪ್ಪ ಮೆಂಡನ್, ಶಾಲಾ ಶಿಕ್ಷಕ ಗೋಪಾಲ್ ಕೊಂಗ್ರಬೆಟ್ಟು, ರಾಮಚಂದ್ರ ಕರೆಂಕಿ, ದಿಲೀಪ್ ಸಪಲ್ಯ ಡೆಚ್ಚಾರು ಹಾಜರಿದ್ದರು.