ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಗುರುವಾರ ತಾಲೂಕು ಕಚೇರಿ ಬಳಿ ನಡೆದ ತಾಲೂಕು ಮಟ್ಟದ  ಗಣರಾಜೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.

www.bantwalnews.com report

ಜಾಹೀರಾತು

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಡಾ. ನವೀನ್ ಬಪ್ಪಳಿಗೆ ಪ್ರಧಾನ ಭಾಷಣ ಮಾಡಿ ಜನರ ಸಕ್ರಿಯ ಭಾಗವಹಿಸುವಿಕಯಿಂದ ಮಾತ್ರ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಲು ಸಾಧ್ಯವಿದೆ ಎಂದರು. ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ಆರೋಗ್ಯಾಧಿಕಾರಿ ಡಾ. ದೀಪಾಪ್ರಭು, ಪುರಸಭಾ ಮುಖ್ಯಾಧಿಕಾರಿ, ಸುಧಾಕರ ಎಂ.ಎಚ್. ಶಿಕ್ಷಣಾಧಿಕಾರಿ ಲೋಕೇಶ್ ಸಿ., ಉಪತಹಶೀಲ್ದಾರರುಗಳಾದ ಪರಮೇಶ್ವರ ನಾಯ್ಕ, ಭಾಸ್ಕರ ರಾವ್, ಲಲಿತಾ ಶೆಟ್ಟಿ, ವಾಸು ಶೆಟ್ಟಿ, ಕಂದಾಯ ನಿರೀಕ್ಷಕರಾದ ನವೀನ್, ರಾಮ ಕೆ., ದಿವಾಕರ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ  ವಿಶುಕುಮಾರ್ ಉಪಸ್ಥಿತರಿದ್ದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಪೊಲೀಸ್, ಗೃಹರಕ್ಷಕದಳ, ಎನ್‌ಸಿಸಿ, ಭಾರತ ಸೇವಾದಳ, ಸ್ಕೌಟ್ಸ್, ಗೈಡ್ಸ್, ಕಬ್, ಬುಲ್ ಬುಲ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಚಂಚನ ನಡೆಯಿತು. ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts