ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಗುರುವಾರ ತಾಲೂಕು ಕಚೇರಿ ಬಳಿ ನಡೆದ ತಾಲೂಕು ಮಟ್ಟದ ಗಣರಾಜೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.
www.bantwalnews.com report
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಡಾ. ನವೀನ್ ಬಪ್ಪಳಿಗೆ ಪ್ರಧಾನ ಭಾಷಣ ಮಾಡಿ ಜನರ ಸಕ್ರಿಯ ಭಾಗವಹಿಸುವಿಕಯಿಂದ ಮಾತ್ರ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಲು ಸಾಧ್ಯವಿದೆ ಎಂದರು. ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ಆರೋಗ್ಯಾಧಿಕಾರಿ ಡಾ. ದೀಪಾಪ್ರಭು, ಪುರಸಭಾ ಮುಖ್ಯಾಧಿಕಾರಿ, ಸುಧಾಕರ ಎಂ.ಎಚ್. ಶಿಕ್ಷಣಾಧಿಕಾರಿ ಲೋಕೇಶ್ ಸಿ., ಉಪತಹಶೀಲ್ದಾರರುಗಳಾದ ಪರಮೇಶ್ವರ ನಾಯ್ಕ, ಭಾಸ್ಕರ ರಾವ್, ಲಲಿತಾ ಶೆಟ್ಟಿ, ವಾಸು ಶೆಟ್ಟಿ, ಕಂದಾಯ ನಿರೀಕ್ಷಕರಾದ ನವೀನ್, ರಾಮ ಕೆ., ದಿವಾಕರ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಶುಕುಮಾರ್ ಉಪಸ್ಥಿತರಿದ್ದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ಪೊಲೀಸ್, ಗೃಹರಕ್ಷಕದಳ, ಎನ್‌ಸಿಸಿ, ಭಾರತ ಸೇವಾದಳ, ಸ್ಕೌಟ್ಸ್, ಗೈಡ್ಸ್, ಕಬ್, ಬುಲ್ ಬುಲ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಚಂಚನ ನಡೆಯಿತು. ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Be the first to comment on "ಬಿ.ಸಿ.ರೋಡ್ ನಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ"