ಬಂಟ್ವಾಳ

28ರಂದು ಖಲೀಲ್ ಹುದವಿ ಆಲಡ್ಕಕ್ಕೆ

ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ 2 ದಿವಸಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಜನವರಿ 28 ರಂದು ಶನಿವಾರ ರಾತ್ರಿ ಖ್ಯಾತ ವಾಗ್ಮಿ ಖಲೀಲ್ ಹುದವಿ ಮುಖ್ಯ ಭಾಷಣಗೈಯುವರು.

www.bantwalnews.com report

ಆಲಡ್ಕ ಮೈದಾನ-ಸಂಶುಲ್ ಉಲಮಾ ನಗರದ ಮರ್‌ಹೂಂ ಶೈಖುನಾ ಸಜಿಪ ಉಸ್ತಾದ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಜನವರಿ 29 ರಂದು ಮಾಡನ್ನೂರ್ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಪ್ರಾಂಶುಪಾಲ ಅಡ್ವಕೇಟ್ ಹನೀಫ್ ಹುದವಿ ಹಾಗೂ ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಅವರು ಮುಖ್ಯ ಭಾಷಣಗೈಯುವರು.

ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಇದರ ನೂತನ ಉಪಾಧ್ಯಕ್ಷ ಶೈಖುನಾ ಹಾಜಿ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಯ್ಯಿದ್ ಎನ್.ಪಿ.ಎಂ. ಫಝಲ್ ಹಾಮಿದ್ ಪೂಕೋಯ ತಂಙಳ್ ಅಲ್-ಬುಖಾರಿ ಕುನ್ನುಂಗೈ, ಸಯ್ಯಿದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ, ಮೂಡಿಗೆರೆ ಖಾಝಿ ಕಾಸಿಂ ಮುಸ್ಲಿಯಾರ್, ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್ ಬಂಟ್ವಾಳ, ಮುಡಾ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಜಿ.ಪಂ. ಸದಸ್ಯರಾದ  ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಕೆ.ಕೆ. ಶಾಹುಲ್ ಹಮೀದ್, ಬಂಟ್ವಾಳ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಬುಡಾ ನಿಕಟ ಪೂರ್ವಾಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್,  ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಜಿಲ್ಲಾ ವಕ್ಫ್ ಬೋರ್ಡ್ ಚೆಯರ್‌ಮೆನ್ ಹಾಜಿ ಎಸ್.ಎಂ. ರಶೀದ್, ಎಸ್ಕೆಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಸ್ಹಾಕ್ ಫೈಝಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಶಾಖಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts