ಬಂಟ್ವಾಳನ್ಯೂಸ್ ವರದಿ
ಇರಾ ಕಾಂಗ್ರೆಸ್ ಹಾಗೂ ವಲಯ ಆಶ್ರಯದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಇಂದಿರಾಗಾಂಧಿ ಜನ್ಮ ಶತಾಬ್ಧಿ ವರ್ಷಾಚರಣೆ ಪ್ರಯುಕ್ತ ಇರಾ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮ್ಯಾಟ್ ಕಬಡ್ಡಿ ಪ್ರಿಯದರ್ಶಿನಿ ಟ್ರೋಫಿ-2017 ಇರಾದಲ್ಲಿ ಅದ್ದೂರಿಯಾಗಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.
ಸಚಿವ ಯು.ಟಿ.ಖಾದರ್ ಮಾತನಾಡಿ, ದೇಶಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳ ನೆನಪಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ.ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರಾದ ದಿವ್ಯಪ್ರಭಾ ಚಿಲ್ತಡ್ಕ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಮಮತಾ ಡಿ.ಎಸ್.ಗಟ್ಟಿ, ಮನಪಾ ಮಾಜಿ ಮೇಯರ್ ಅಶ್ರಫ್ ಕೆ, ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಅಬ್ದುಲ್ ಖಾದರ್, ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಶಾಂತ ಕಾಜವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಎಸ್.ಕರೀಂ, ಅಂಬ್ಲಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ರಫೀಕ್, ಮಂಜನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಅಸೈ, ಕೆಎಸ್‌ಆರ್‌ಟಿಸಿ ನಿರ್ದೇಶಕ ಮುಖಂಡ ಟಿ.ಕೆ.ಸುಧೀರ್, ಬಂಟ್ವಾಳ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಪಟ್ಟೋರಿ, ಉದ್ಯಮಿ ಇಬ್ರಾಹಿಂ ನಡುಪದವು, ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ಬೇಬಿ ಕುಂದರ್, ಕಾಂಗ್ರೆಸ್ ಎಸ್‌ಸಿ ಘಟಕಾಧ್ಯಕ್ಷ ಪದ್ಮನಾಭ ನರಿಂಗಾನ, ಶಮೀರ್ ಪಜೀರ್, ತನಿಯಪ್ಪ ಬೆಳ್ಚಾಡ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ,ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
Be the first to comment on "ಅದ್ದೂರಿಯಾಗಿ ಇರಾದಲ್ಲಿ ನಡೆದ ಮ್ಯಾಟ್ ಕಬಡ್ಡಿ"