www.bantwalnews.com report
ಬಂಟ್ವಾಳ ತಾಲ್ಲೂಕಿನ ಬೆಂಜನಪದವಿನಲ್ಲಿ ಮೀಸಲಿಟ್ಟ ಹತ್ತು ಎಕರೆ ಸಕರ್ಾರಿ ಜಮೀನಿನಲ್ಲಿ ರೂ 10 ಕೋಟಿ ವೆಚ್ಚದ ಜಿಲ್ಲಾ ಮಟ್ಟದ ಕ್ರೀಡಾಂಗಣ ನಿಮರ್ಿಸಲು ಸಕರ್ಾರದಿಂದ ಈಗಾಗಲೇ ಮಂಜೂರಾತಿ ದೊರೆತಿದ್ದು, ಮುಂದಿನ ದಿನಗಳಲ್ಲಿ ಕ್ರೀಡಾ ಕಾಂಪ್ಲೆಕ್ಸ್ ನಿಮೀಸಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಇಲ್ಲಿನ ವಾಮದಪದವು ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಧರ್ಮಗುರು ಎ.ಪತ್ರಾವೊ ಸ್ಮರಣಾರ್ಥ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಅಂತರ್ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಶಾಲಾ ಕಾಲೇಜುಗಳಲ್ಲಿ ಕ್ರೀಡಾಂಗಣ ಅಭಿವೃದ್ಧಿ ಜೊತೆಗೆ ಪ್ರತೀ ಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ನಿಮರ್ಿಸಲು ಜಮೀನು ಕಾದಿರಿಸುವ ಅಗತ್ಯವಿದೆ ಎಂದು ಹೇಳಿದ ಅವರು ಈಗಾಗಲೇ ಅರಣ್ಯ ಇಲಾಖೆಯಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವೈಟ್ಲಿಫ್ಟರ್ ಸುಪ್ರೀತಾ ಪೂಜಾರಿ ಸಹಿತ ಒಟ್ಟು 140 ಮಂದಿ ಕ್ರೀಡಾಪಟುಗಳಿಗೆ ಉದ್ಯೋಗ ಅವಕಾಶ ಒದಗಿಸಲಾಗಿದೆ ಎಂದರು. ಶಿಕ್ಷಣ ಸಂಸ್ಥೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಂದ ವಿವಿಧ ಕ್ರೀಡಾ ಪ್ರತಿಭೆಗಳು ಅನಾವರಣಗೊಳ್ಳುತ್ತಿದ್ದು, ಕಬಡ್ಡಿಯಂತಹ ಗ್ರಾಮೀಣ ಕ್ರೀಡೆ ಇಂದು ‘ಪ್ರೊ-ಕಬಡ್ಡಿ’ ಮೂಲಕ ವಿವಿಧ ಮಾಧ್ಯಮಗಳಲ್ಲಿ ನೇರ ಪ್ರಸಾರ ಮೂಲಕ ಗುರುತಿಸಲ್ಪಟ್ಟಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸೈಯ್ಯದ್ ಗೌಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ ಪರಿಣಾಮ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ ಎಂದರು.
ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿದರ್ೇಶಕ ಡಾ. ಕಿಶೋರ್ ಸಿ.ಕೆ. ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯವು ಕ್ರೀಡೆಗೆ ಹೆಚ್ಚು ಆದ್ಯತೆ ನೀಡುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕ್ರೀಡಾ ಸಾಧಕರಿಗೆ ಲಕ್ಷಾಂತರ ಮೊತ್ತದ ವಿದ್ಯಾಥರ್ಿವೇತನ, ಹೆಚ್ಚುವರಿ ಅಂಕ ಮತ್ತಿತರ ಸೌಲಭ್ಯ ನೀಡುತ್ತಿದೆ. ಇದರಿಂದಾಗಿ ಇದೇ ಪ್ರಥಮ ಬಾರಿಗೆ ಒಟ್ಟು 30ಕ್ಕೂ ಮಿಕ್ಕಿ ತಂಡ ಇಲ್ಲಿನ ಪಂದ್ಯಾಟದಲ್ಲಿ ಭಾಗವಹಿಸಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಬೂಡಾ ನಿಕಟಪೂರ್ವ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್ ಶೆಟ್ಟಿ, ಕಬಡ್ಡಿ ರಾಷ್ಟ್ರೀಯ ಆಟಗಾರ, ವಿಜಯ ಬ್ಯಾಂಕ್ ಪ್ರಬಂಧಕ ಬೇಬಿ ಕುಂದರ್, ಗೇರು ಅಭಿವೃದ್ಧಿ ನಿಗಮ ಸದಸ್ಯ ಜಗದೀಶ ಕೊಯಿಲ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅಮ್ಮು ರೈ ಹಕರ್ಾಡಿ, ನವೀನ್ಚಂದ್ರ ಶೆಟ್ಟಿ, ದೈಹಿಕ ಶಿಕ್ಷಣ ನಿದರ್ೇಶಕ ಪ್ರೊ.ರಾಧಾಕೃಷ್ಣ ಎಚ್.ಬಿ. ಮತ್ತಿತರರು ಉಪಸ್ಥಿತರಿದ್ದರು.
ಉಪನ್ಯಾಸಕ ಪ್ರೊ.ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿಮ, ಪ್ರೊ.ರವಿ ಎಂ.ಎಸ್. ವಂದಿಸಿದರು. ಪ್ರೊ.ಸುರೇಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಬೆಂಜನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್ಗೆ ಚಿಂತನೆ: ಸಚಿವ ರೈ"