ಕೊನೆಗೂ ಕನ್ನಡದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ. ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ಈ ನೀತಿ ಅನ್ವಯವಾಗಲಿದೆ.
ಫೆ.6ರಿಂದ ವಿಧಾನಸಭೆ ಅಧಿವೇಶನ ನಡೆಯಲಿದೆ. ಈ ಸಂದರ್ಭ ಅಗತ್ಯ ಕಾನೂನು ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿತು.
ಸರ್ವೋಚ್ಚ ನ್ಯಾಯಾಲಯ ನಿಷೇಧ ಹೇರಿದ್ದರೂ ತಮಿಳುನಾಡು ಸರಕಾರ ಜಲ್ಲಿಕಟ್ಟು ವಿಗೆ ಕಾನೂನು ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದ ನಂತರ ಕರ್ನಾಟಕದಲ್ಲಿಯೂ ನಿಷೇಧಿತ ಕಂಬಳಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಹೋರಾಟ ಕಳೆದ ಕೆಲ ದಿನಗಳಿಂದ ನಡೆಯುತ್ತಿದೆ. ಮೂಡುಬಿದರೆಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆದಿತ್ತು. ಮಂಗಳೂರಲ್ಲೂ ಮಾನವ ಸರಪಳಿಯಂಥ ಪ್ರತಿಭಟನೆಗಳು ನಡೆಯಲಿವೆ.
Be the first to comment on "ಕಂಬಳಕ್ಕೆ ಕಾನೂನಿನ ಮಾನ್ಯತೆಗೆ ಸರಕಾರ ನಿರ್ಧಾರ"