ಫೆ.1: ಎಸ್‌ವಿಎಸ್ ಕಾಲೇಜಿನ ಸುವರ್ಣ ಸಂಭ್ರಮಕ್ಕೆ ಚಾಲನೆ

ಎಸ್‌ವಿಎಸ್ ಕಾಲೇಜಿನ ಸುವರ್ಣಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಫೆ.1ರಂದು ನಡೆಯಲಿದ್ದು ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಉದ್ಘಾಟಿಸಲಿದ್ದು ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಉಪಸ್ಥಿತರಿರುವರು.

ಜಾಹೀರಾತು

ಫೆ.2ರಂದು ಪ್ರತಿಭಾ ಪುರಸ್ಕಾರ ದಿನದಂದು ಮಣಿಪಾಲ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿನ ಮುಖ್ಯಸ್ಥೆ ಡಾ. ಪೂರ್ಣಿಮಾ ಬಾಳಿಗಾ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಜಾಹೀರಾತು

ಫೆ. 3ರಂದು 49ನೇ ಕಾಲೇಜು ವಾರ್ಷಿಕೋತ್ಸವದ ಸಂಭ್ರಮವಾದ್ದರಿಂದ ಮುಖ್ಯ ಅತಿಥಿಯಾಗಿ ಮಂಗಳೂರು ವಲಯದ ಖಾಸಗಿ ಕಾಲೇಜು ಆಡಳಿತ ಸಂಘದ ಕಾರ್ಯದರ್ಶಿ ಪ್ರೋ. ವೈ. ಭಾಸ್ಕರ್ ಶೆಟ್ಟಿ ಹಾಗೂ ಕರ್ನಾಟಕ ಸರಕಾರದ ನಗರ ಅಭಿವೃದ್ದಿ ಶಾಖೆಯ ಕೋಶಾಧಿಕಾರಿ ಕೆ.ಎ. ಹಿದಾಯತುಲ್ಲಾ ಅತಿಥಿಗಳಾಗಿ ಅಗಮಿಸಲಿದ್ದಾರೆ.

ಫೆ.4ರಂದು ವಿದ್ಯಾರ್ಥಿ ಸಂಘ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಯಕ್ಷಗಾನ ಕಲಾವಿದ ಜಬ್ಬಾರ್ ಸಮೊ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು ಹಾಗೂ ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಲಿರುವರು ಎಂದು ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಡುರಂಗ ನಾಯಕ್ ಮತ್ತು  ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಶಿಕಲಾ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಫೆ.1: ಎಸ್‌ವಿಎಸ್ ಕಾಲೇಜಿನ ಸುವರ್ಣ ಸಂಭ್ರಮಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*