ಕಾಳಧನಿಕರಿಗೆ ಪ್ರಧಾನಮಂತ್ರಿ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ಭಾರತ ತೀವ್ರ ತೊಂದರೆಯಲ್ಲಿ ಸಿಲುಕಿದೆ ಎಂದು ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.
www.bantwalnews.com report
ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬಿ.ಸಿ.ರೋಡ್ ನಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನಾ ಸಭೆ ಕರಾಳ ದಿನ ಆಚರಣೆ ಸಂದರ್ಭ ಅವರು ಮಾತನಾಡಿ, ಕೇಂದ್ರ ನೀತಿ ಬಡವರ ವಿರೋಧಿಯಾಗಿದೆ ಎಂದು ಟೀಕಿಸಿದರು.ಬಡವರು ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಉದ್ಯಮಿಗಳು ಲಾಭ ಮಾಡಿಕೊಳ್ಳುತ್ತಾರೆ ಎಂದು ಆಪಾದಿಸಿದರು.
ಎಸ್ ಡಿಪಿಐ ಬಂಟ್ವಾಳ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಮೂಲ್ಕಿ ಘಟಕ ಅಧ್ಯಕ್ಷ ಅಶ್ರಫ್ ಎ.ಕೆ., ಸಜಿಪ ಗ್ರಾಪಂ ಅಧ್ಯಕ್ಷ ನಸೀರ್ ಸಜಿಪ, ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಮಂಚಿ, ಎಸ್ ಡಿಟಿಯು ಜಿಲ್ಲಾಧ್ಯಕ್ಷ ಯೂಸೂಫ್ ಆಲಡ್ಕ, ಪುರಸಭಾ ಸದಸ್ಯ ಮುನೀಶ್ ಆಲಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅನ್ವರ್ ಸಾದತ್, ಜಿಲ್ಲಾ ಕಾರ್ಯದರ್ಶಿ ನವಾಜ್ ಉಳ್ಳಾಲ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಇಸ್ಮಾಯಿಲ್ ಬಾವ ಸ್ವಾಗತಿಸಿದರು. ರಿಯಾಜ್ ಕಡಂಬು ಕಾರ್ಯಕ್ರಮ ನಿರೂಪಿಸಿದರು.