ಬಂಟ್ವಾಳ

ಸಂಶುಲ್ ಉಲಮಾ ಅನುಸ್ಮರಣೆ, ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ

ಬಂಟ್ವಾಳನ್ಯೂಸ್ ವರದಿ
ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3ನೆ ವಾರ್ಷಿಕೋತ್ಸವದ ಅಂಗವಾಗಿ ಸಂಶುಲ್ ಉಲಮಾ ನಗರದ ಆಲಡ್ಕ ಮೈದಾನದಲ್ಲಿ ಮರ್‌ಹೂಂ ಸಜಿಪ ಉಸ್ತಾದ್ ವೇದಿಕೆಯಲ್ಲಿ ಭಾನುವಾರ ರಾತ್ರಿ ನಡೆದ ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ ನಡೆಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೌಹಾರ್ದತೆ ಇದ್ದಲ್ಲಿ ಮಾತ್ರ ಸುಂದರ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮೀಯರು ಶ್ರಮಿಸಬೇಕಾಗಿದೆ ಎಂದು ಸಚಿವ ಬಿ.ರಮಾನಾಥ ರೈ ಹೇಳಿದರು.


ಮೂಡಿಗೆರೆ ಸಂಯುಕ್ತ ಜಮಾಅತ್ ಖಾಝಿ ಖಾಸಿಂ ಮುಸ್ಲಿಯಾರ್ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸೈಯದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸೈಯದ್ ಎನ್.ಪಿ.ಎಂ. ಫಝಲ್ ಹಾಮಿದ್ ಪೂಕೋಯ ತಂಙಳ್ ಅಲ್-ಬುಖಾರಿ ಕುನ್ನುಂಗೈ ದುವಾಶಿರ್ವಚನಗೈದರು. ಮಾಡನ್ನೂರ್ ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ಪ್ರಾಂಶುಪಾಲ ಅಡ್ವಕೇಟ್ ಹನೀಫ್ ಹುದವಿ ಮುಖ್ಯ ಭಾಷಣಗೈದರು.
ಮುಖ್ಯ ಅತಿಥಿಗಳಾಗಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮುಡಾ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಪುರಸಭಾ ಸದಸ್ಯ ಸದಾಶಿವ ಬಂಗೇರ, ನಾಮ ನಿರ್ದೇಶಿತ ಸದಸ್ಯ ಅಬೂಬಕ್ಕರ್ ಸಿದ್ದೀಕ್, ಮಾಜಿ ಸದಸ್ಯ ಹಾಜಿ ಪಿ.ಮುಹಮ್ಮದ್ ರಫೀಕ್, ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಎಚ್.ಎಸ್.ಉಸ್ಮಾನ್ ಹಾಜಿ ಪಾಣೆಮಂಗಳೂರು, ನಂದಾವರ ಕೇಂದ್ರ ಜುಮಾ ಮಸೀದಿ ಖತೀಬ್ ಹಾಜಿ ಎನ್.ಎಚ್.ಆದಂ ಫೈಝಿ, ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆ ಅಧ್ಯಕ್ಷ ಮುಹಮ್ಮದ್ ಹನೀಫ್ ಮೆಲ್ಕಾರ್, ಪ್ರಧಾನ ಕಾರ್ಯದರ್ಶಿ ಇರ್ಷಾದ್ ಗುಡ್ಡೆಯಂಗಡಿ, ಕೋಶಾಧಿಕಾರಿ ಹನೀಫ್ ಆಸ್ಕೋ, ಮಾಜಿ ಅಧ್ಯಕ್ಷ ಮುಹಮ್ಮದ್ ಬಶೀರ್, ಪ್ರಮುಖರಾದ ಅಹ್ಮದ್ ಬಾವಾ ಯಾಸೀನ್, ಹಾಜಿ ಎಸ್.ಅಬ್ಬಾಸ್ ಸಜಿಪ, ಪಿ.ಬಿ.ಅಹ್ಮದ್ ಹಾಜಿ ಪಾಣೆಮಂಗಳೂರು, ಎನ್.ಬಿ.ಅಬೂಬಕ್ಕರ್, ಅಬ್ದುಲ್ ಖಾದರ್ ಹಾಜಿ ಬೋಗೋಡಿ, ಅಬ್ದುಲ್ ಅಝೀಝ್ ಆಲಡ್ಕ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಮೂಡಿಗೆರೆ ಸಂಯುಕ್ತ ಜಮಾಅತ್ ಖಾಝಿ ಖಾಸಿಂ ಮುಸ್ಲಿಯಾರ್ ಮತ್ತು ಸಚಿವ ಬಿ.ರಮಾನಾಥ ರೈರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಬೂಸ್ವಾಲಿ ಫೈಝಿ ಅಕ್ಕರಂಗಡಿ ಸ್ವಾಗತಿಸಿದರು. ಶಫೀಕ್ ವಂದಿಸಿದರು. ಎಸ್ಕೆಎಸ್ಸೆಸ್ಸೆಫ್ ಸದಸ್ಯ ಸೈದ್ ಗುಡ್ಡೆಅಂಗಡಿ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts