ಸೋಲು-ಗೆಲುವು ಒಂದು ನಾಣ್ಯದ ಎರಡು ಮಖಗಳಿದ್ದಂತೆ. ಇದನ್ನು ಸಮಾನ ಮನಸ್ಥಿತಿಯಿಂದ ಸ್ವೀಕರಿಸುವ ಮನೋಭಾವ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿರಬೇಕು. ಎಂದು ಪೆರ್ನೆ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕಲ್ಲಡ್ಕ ಹೇಳಿದರು.
ಅವರು ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾ ಸಂಘದ ವತಿಯಿಂದ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಸಂಘಟಿತರಾಗಿ ಬದುಕನ್ನು ಕಟ್ಟುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸಂಘಟಿತ ಬದುಕಿನಿಂದ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದರು.
ದೈಹಿಕ ಶಿಕ್ಷಕ ನಿರ್ದೆಶಕರಾದ ಅರವಿಂದಪ್ರಸಾದ್ ಕ್ರೀಡಾಪಟುಗಳಿಗೆ ಕ್ರೀಡಾಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಚಿತ್ತರಂಜನ್ ಹೊಸಕಟ್ಟ, ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್‌ನ ಕೋಶಾಧಿಕಾರಿ ಶಿವಗಿರಿ ಸತೀಶ್‌ಭಟ್, ಶ್ರೀರಾಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ಮತ್ತು ಕಾಲೇಜು ಪ್ರಾಂಶುಪಾಲ ಕೃಪ್ಣಪ್ರಸಾದ್ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ತೀರ್ಥೇಶ್ ,ಯೋಗಿಶ್, ಸ್ವಾತಿ, ಶ್ರೀದೇವಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದರು. ಉಪನ್ಯಾಸಕ ರಂಜಿತ್ ಸ್ವಾಗತಿಸಿ, ಜಯಲಕ್ಷ್ಮೀ ವಂದಿಸಿ, ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.