ದ.ಕ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ವಗ್ಗ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ಸ್-ಬುಲ್ ಬುಲ್ಸ್ ಉತ್ಸವ 2016-17 ಕಾರ್ಯಕ್ರಮ ಬುಧವಾರ ಜರಗಿತು.
ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಮೂಡಿಸುವ ಉತ್ತಮ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳಲ್ಲಿ ಸಿಗುವ ಮೌಲ್ಯಯುತವಾದ ಅಂಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ಸಿಗಲಿದೆ. ಸ್ವಾಸ್ಥ ಸಮಾಜ ನಿರ್ಮಾಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬಹಳ ಮಹತ್ತರ ಪಾತ್ರ ವಹಿಸಿದೆ ಎಂದು ಹೇಳಿದರು.
ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಜೊತೆ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ವ್ಯಕ್ತಿಯನ್ನಾಗಿ ಬೆಳೆಸಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿ ಸಾಧನೆಯ ಮೆಟ್ಟಿಲೇರಲು ಮನಸ್ಸಿಗೆ ನೆಮ್ಮದಿ ಕೂಡ ಅಷ್ಟೇ ಮುಖ್ಯ ಎಂದರು.
ಮಂಗಳೂರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಎನ್.ಜಿ.ಮೋಹನ್, ಮಂಗಳೂರು ಸ್ಕೌಟ್ಸ್ ವಿಭಾಗದ ಆಯುಕ್ತ ರಾಮಶೇಷ ಶೆಟ್ಟಿ,ಕಾಲೇಜಿನ ಪ್ರಾಂಶುಪಾಲೆ ರೇಖಾ ಬಿ., ವಗ್ಗ ಯುನೈಟೆಡ್ ಕ್ರಿಶ್ಚಿಯನ್ ಆಸೋಸಿಯೇಶನ್ ನಿರ್ಕಾನ ಘಟಕದ ಅಧ್ಯಕ್ಷ ಬೆನೆಡಿಕ್ಟ್ ಡಿಸೋಜ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೋಶಾಧಿಕಾರಿ ವಾಸುದೇವ ಬೋಳಾರ, ಕಾವಳಪಡೂರು ಹಾ.ಉ.ಸ.ಸಂಘದ ಅಧ್ಯಕ್ಷ ಶ್ರೀನಿವಾಸ ,ಬಿ.ಆರ್.ಪಿ. ಕೆಂಪಣ್ಣ,ಮಧ್ವ ಕ್ಲಸ್ಟರ್‌ನ ಸಿ.ಆರ್.ಪಿ. ವೇಣುಗೋಪಾಲ್, ಸ್ಕೌಟ್ಸ್‌ನ ಪ್ರಮುಖರಾದ ಶಾಂತಾರಾಮ ಪ್ರಭು,ರ್‍ಯಾಲಿ ನಿರ್ದೇಶಕರಾದ ಹರಿಪ್ರಸಾದ್,ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ದೇವದಾಸ್ ಕೆ. ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಎಂ.ತುಂಬೆ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಐತಪ್ಪ ಪೂಜಾರಿ ವಂದಿಸಿದರು. ಪ್ರೀತಿ ಪ್ಲೇವಿ ಅವರು ಕಾರ್ಯಕ್ರಮ ನಿರೂಪಿಸಿದರು.