ಕೇಂದ್ರ ಸರಕಾರ ಜಾರಿಗೆ ತರಳಿರುವ ಮೋಟಾರು ವಾಹನ ಕಾಯ್ದೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಸಭೆ ಶುಕ್ರವಾರ ಬಿ.ಸಿ.ರೋಡಿನ ಮೇಲ್ಸೇತುವೆಯ ಅಡಿಯಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಪೆಟ್ರೋಲ್ ಬೆಲೆ ಏರಿಕೆಯಾದಾಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಯವರು ಈಗ ಏಕೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದರು.
www.bantwalnews.com report
ಉದ್ದೇಶಿತ ಮೋಟಾರು ಕಾಯ್ದೆ ವಿರುದ್ಧ ಬಿಎಂಎಸ್ ಸಂಘಟನೆಯಿಂದಲೇ ಆಕ್ಷೇಪ ವ್ಯಕ್ತಪಡಿಸಿದ್ದು ಕಾಯ್ದೆ ಜಾರಿಯಿಂದ ವಾಹನ ಸವಾರರು ತೊಂದರೆಗೊಳಗಾಗುತ್ತಾರೆ ಎಂದರು
ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಮುಖಂಡ ಜನಾರ್ಧನ ಚೆಂಡ್ತಿಮಾರ್ ಮಾತನಾಡಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾಪಂ ಸದಸ್ಯ ಸಂಜೀವ ಪೂಜಾರಿ ಪ್ರಮುಖರಾದ ಎ.ಸಿ.ಭಂಡಾರಿ, ಪಾಣೆಮಂಗಳೂರು ಬ್ಲಾಕ್ ಕಾರ್ಯದರ್ಶಿ
ಮಹಮ್ಮದ್ ನಂದಾವರ, ಪಕ್ಷದ ಪುರಸಭೆ, ತಾಪಂ, ಎಪಿಎಂಸಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Be the first to comment on "ಕೇಂದ್ರ ಈಗ್ಯಾಕೆ ಮಾತಾಡಲ್ಲ? ರಮಾನಾಥ ರೈ ಪ್ರಶ್ನೆ"