ಪಿಕಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಕೈಲಾರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
www.bantwalnews.com report
ಇಲ್ಲಿನ ಮಾದಾರ್ ನಿವಾಸಿ ರಾಜಪ್ಪ ಪೂಜಾರಿ ಎಂಬವರ ಪುತ್ರ ಗಣೇಶ್ ಪೂಜಾರಿ(26) ಮೃತಪಟ್ಟ ಬೈಕ್ ಸವಾರ.
ಯುವಕ ಮನೆಯಿಂದ ತನ್ನ ಬೈಕ್‌ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನಿಂದ ಚಿಕ್ಕಮಂಗಳೂರಿಗೆ ತೆರಳುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಗಣೇಶ್ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…