ತುಳುನಾಡಿನಲ್ಲಿ ಗರಿಷ್ಟ ಧಾರ್ಮಿಕ ಕ್ಷೇತ್ರ ಪುನರುತ್ಥಾನ: ಹೆಗ್ಗಡೆ

ಅರಳ: ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಧಾರ್ಮಿಕ ಸಭೆ

www.bantwalnews.com report

 ತುಳುನಾಡಿನಲ್ಲಿ ಕಳೆದ 25 ವರ್ಷಗಳಲ್ಲಿ ಗರಿಷ್ಟ ಪ್ರಮಾಣದಲ್ಲಿ ದೈವಸ್ಥಾನ ಮತ್ತು ದೇವಸ್ಥಾನ ಮತ್ತಿತರ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪುನರುತ್ಥಾನಗೊಂಡಿರುವುದು ಉತ್ತಮ ಬೆಳವಣಿಗೆಕೆಯಾಗಿದೆ. ದೇವರ ಮೇಲಿನ ಅನನ್ಯ ಭಕ್ತಿ ಮತ್ತು ಶ್ರದ್ಧೆ ಜೊತೆಗೆ ವಿಶ್ವಾಸದಿಂದ ಇಂತಹ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಾಗ ದೇವರ ಅನುಗ್ರಹ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಜಾಹೀರಾತು

ತಾಲ್ಲೂಕಿನ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಸಂದೇಶ ನೀಡಿದರು.

ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಪ್ರತಿನಿತ್ಯ ಭಗವಂತನ ಭಕ್ತಿಯಿಂದ ಸದ್ಗುಣ ಬೆಳೆದು ಮನಸ್ಸು ಶುದ್ಧವಾಗುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸಾಮಾಜಿಕ ಬದಲಾವಣೆಯಿಂದ ಜನಸಾಮಾನ್ಯರು ಕೂಡಾ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿದೆ ಎಂದರು.

ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್. ಶೆಟ್ಟಿ, ಅರಳ ಕ್ಷೇತ್ರದ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ  ಅಧ್ಯಕ್ಷ ಎ.ರಾಜೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎನ್.ಎಂ.ಅಡ್ಯಂತಾಯ, ಪ್ರಧಾನ ಅರ್ಚಕ ಎ.ರಾಜ ಭಟ್ ಹುಣ್ಸೆಯಡಿ ಮತ್ತಿತರರು ಶುಭ ಹಾರೈಸಿದರು.

ಇದೇ ವೇಳೆ ಅರಳ ಕ್ಷೇತ್ರದ ವೆಬ್‌ಸೈಟ್ ಅನಾವರಣಗೊಳಿಸಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಮುರಳೀಧರ ಶೆಟ್ಟಿ, ಕೋಶಾಧಿಕಾರಿ ರಂಜನ್ ಕುಮಾರ್ ಶೆಟ್ಟಿ, ಡೊಂಬಯ ಬಿ.ಅರಳ, ವಿವಿಧ ಸಮಿತಿ ಪದಾಧಿಕಾರಿಗಳು ಇದ್ದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ ಆಳ್ವ ಅಗ್ಗೊಂಡೆ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಲಕ್ಷ್ಮೀಧರ ಶೆಟ್ಟಿ ಮಧ್ಯಾಳ ವಂದಿಸಿದರು. ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ತುಳುನಾಡಿನಲ್ಲಿ ಗರಿಷ್ಟ ಧಾರ್ಮಿಕ ಕ್ಷೇತ್ರ ಪುನರುತ್ಥಾನ: ಹೆಗ್ಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*