ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ವತಿಯಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಸ್ನೇಹ ಸಮ್ಮಿಲನ ಹಾಗೂ ನೂತನ ಅಧ್ಯಕ್ಷರ ಭೇಟಿ ಕಾರ್‍ಯಕ್ರಮ ನಡೆಯಿತು.
www.bantwalnews.com report
ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಬಿ.ಕೆ. ಮಂಜಯ್ಯ ಉದ್ಘಾಟಿಸಿ ಮಾತನಾಡಿ,. ಬಂಟ್ವಾಳ ವಲಯ ಗ್ಯಾರೇಜು ಮಾಲಕರ ಸಂಘ ಉತ್ತಮ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು ಇಲಾಖಾ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ನೂತನ ಅಧ್ಯಕ್ಷ ದಿವಾಕರ, ಕಾರ್ಮಿಕ ಕಲ್ಯಾಣಾಧಿಕಾರಿ ಮರ್ಲಿನ್ ಗ್ರೇಸಿ ಡಿಸೋಜಾ ಭಾಗವಹಿಸಿದ್ದರು. ಕೋಶಾಧಿಕಾರಿ ಬಿ. ವಿಶ್ವನಾಥ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಪರಸರ ಪ್ರೇಮಿ ದಾಮೋದರ್ ಸಂಚಯಗಿರಿ ಹಾಗೂ ಟ್ರಾಫಿಕ್ ವಾರ್ಡನ್ ರಹಿಮಾನ್ ಪಟೇಲ್ ಅವರನ್ನು ಸನ್ಮಾನಿಸಲಾಯಿತು. ನಿಕಟಪೂರ್ವಾಧ್ಯಕ್ಷ ಸುಧಾಕರ ಸಾಲ್ಯಾನ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯದರ್ಶಿ ಜಗದೀಶ ರೈ ವಾರ್ಷಿಕ ವರದಿ ಮಂಡಿಸಿದರು. ಸಿದ್ದೀಕ್ ವಂದಿಸಿದರು, ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…