ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಮಿತಿ ಇದರ ಆಶ್ರಯದಲ್ಲಿ ಶ್ರೀ ಗೋಪಾಕೃಷ್ಣ ಯಕ್ಷಗಾನ ಕಲಾಮಂಡಳಿ ಎಡನೀರು ಕಾಸರಗೋಡು ಇವರಿಂದ ಯಕ್ಷಗಾನ ಸಪ್ತಾಹಕ್ಕೆ ಮೆಲ್ಕಾರ್‌ನ ಆರ್.ಕೆ. ಎಂಟರ್‌ಪ್ರೈಸಸ್‌ನ ಎದುರು ಚಾಲನೆ ಸಿಕ್ಕಿತ್ತು.
www.bantwalnews.com report
ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಕೇಶವಾನಂದ ಮಹಾಸ್ವಾಮಿ ದೀಪಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶೆಣೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಬಿ.ರಘು ಸಪಲ್ಯ, ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.
ಸಮಿತಿಯ ಗೌರವಧ್ಯಕ್ಷ ಎ.ಸಿ.ಭಂಡಾರಿ, ಪ್ರಧಾನ ಕಾರ್ಯದರ್ಶಿಗಳಾದ ಬಿ. ತಮ್ಮಯ್ಯ, ರಾಂ ಗಣೇಶ್ ಪ್ರಭು, ಕಾರ್ಯದರ್ಶಿ ಡಿ.ಎಂ.ಕುಲಾಲ್, ಕೋಶಾಕಾರಿ ಐತಪ್ಪ ಆಳ್ವ ಹಾಜರಿದ್ದರು. ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಎವ್. ಶಿವಶಂಕರ್ ವಂದಿಸಿದರು, ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…