12 ದಿನಗಳಿಂದ ನೀರಿಲ್ಲ: ಕಾಮಾಜೆ ನಾಗರಿಕರ ಪ್ರತಿಭಟನೆ

ಕಾಮಾಜೆ ಪರಿಸರದಲ್ಲಿ ಹನ್ನೆರಡು ದಿನಗಳಿಂದ ನೀರು ಪೂರೈಕೆ ಆಗಿಲ್ಲ ಎಂದು ಆರೋಪಿಸಿ ಮಂಗಳವಾರ ಪುರಸಭೆಗೆ ಇಲ್ಲಿನ ನಿವಾಸಿಗಳು ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇಲ್ಲಿನ ವಾರ್ಡಿನ ಸುಮಾರು ಮುನ್ನೂರರಷ್ಟು ಮನೆಗಳಿಗೆ ನೀರು ಪೂರೈಸುವ ಬೋರ್ ವೆಲ್ ಹಾಳಾಗಿದ್ದು ಈ ಸಮಸ್ಯೆ ತಲೆದೋರಿತ್ತು.

ಜಾಹೀರಾತು

ಸ್ಥಳೀಯ ಸದಸ್ಯ ಭಾಸ್ಕ ಟೈಲರ್ ಈ ಕುರಿತು ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಗದಿರುವ ಕಾರಣ  ಆಕ್ರೋಶಿತರಾದ ನಾಗರಿಕರು ಭಾಸ್ಕರ್ ಟೈಲರ್ ನೇತೃತ್ವದಲ್ಲಿ ಪುರಸಭಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸದಸ್ಯರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಸುಗುಣಾ ಕಿಣಿ ಪ್ರತಿಭಟನಕಾರರಿಗೆ ಸಾಥ್ ನೀಡಿದರು.

ಮುಖ್ಯಾಧಿಕಾರಿ ಸುಧಾಕರ್ ಬೋರ್‌ವೆಲ್ ರಿಪೇರಿಮಾಡಲು ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಸಂಜೆಯೊಳಗೆ ಸರಿಪಡಿಸಿ ನೀರು ಪೂರೈಸುವ ಭರವಸೆ ನೀಡಿದರು.

 

ಇದಕ್ಕೆ ಒಪ್ಪದ ಪ್ರತಿಭಟನಕಾರರು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದರು. ಗುತ್ತಿಗೆದಾರರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಾಧಿಕಾರಿ ಸ್ಥಳಕ್ಕೆ ಕರೆಸಿದರೂ ಅವರ ಉತ್ತರ ಸಮಾಧಾನ ತರಲಿಲ್ಲ.

ಸುದ್ದಿ ತಿಳಿದ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಕಾರರ ಮನವೋಲಿಸಲು ಯತ್ನಿಸಿದರು. ಸ್ಥಳಕ್ಕಾಗಮಿಸಿದ ಬಂಟ್ವಾಳ ವೃತ್ತ ನಿರೀಕ್ಷಬಿ.ಕೆ.ಮಂಜಯ್ಯ ಮುಖ್ಯಾಧಿಕಾರಿ ಹಾಗೂ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದರು. ಸಂಜೆಯ ವೇಳೆಗೆ ಗುತ್ತಿಗೆದಾರನಿಂದ ಬೋರ್‌ವೆಲ್ ರಿಪೇರಿ ಮಾಡಿ ನೀರು ಪೂರೈಸುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರಲ್ಲದೆ ನಿಗದಿತ ಸಮಯದಲ್ಲಿ ಬಾರದೇ ಇದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನೀಡಿದ ಭರವಸೆಯಂತೆ ಪ್ರತಿಭಟನಕಾರರು ತಮ್ಮ ಪ್ರತಿಭಟನೆ ಹಿಂಪಡೆದರು.

ಸಂಜೆ ಸುಮಾರು ನಾಲ್ಕು ಗಂಟೆಯ ಹೊತ್ತಿಗೆ ಗುತ್ತಿಗೆದಾರ ಕಾಮಾಜೆಗೆ ಆಗಮಿಸಿ ಕೆಟ್ಟು ಹೋದ ಬೋರ್‌ವೆಲ್ ಅನ್ನು ರಿಪೇರಿ ಮಾಡಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "12 ದಿನಗಳಿಂದ ನೀರಿಲ್ಲ: ಕಾಮಾಜೆ ನಾಗರಿಕರ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*